CrimeNEWSನಮ್ಮಜಿಲ್ಲೆ

ವೈದ್ಯ ದಂಪತಿಗೆ ಇರಿದ ದುಷ್ಕರ್ಮಿಗಳು: ಮೊಬೈಲ್‌ಫೋನ್‌, ಚಿನ್ನಾಭರಣ ಕಸಿದು ಪರಾರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ವೈದ್ಯ ದಂಪತಿಯನ್ನು ದುಷ್ಕರ್ಮಿಗಳು ಇರಿದು ಗಾಯಗೊಳಿಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ವಿಜಯನಗರದಲ್ಲಿ ನಡೆದಿದೆ.

ರೆಡಿಯಾಲಜಿಸ್ಟ್ ಡಾ.ಕೇಶವ್ ಪಿ.ರಾಯಚೂರ್ಕರ್ ಮತ್ತವರ ಪತ್ನಿ ಡಾ.ಕೃಷ್ಣಕುಮಾರಿ ಹಲ್ಲೆಗೊಳಗಾದ ದಂಪತಿ. ಡಾ.ಕೇಶವ್ ಅವರು ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯ ಪಕ್ಕದಲ್ಲಿ ಎಎಕ್ಸ್ ಎಲ್ ಪ್ರೈಮ್ ಎಂಬ ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಗುರುವಾರ ರಾತ್ರಿ 8.30ರ ಸುಮಾರಿಗೆ ಹೆಲ್ಮೆಟ್, ಮಾಸ್ಕ್ ಧರಿಸಿ ವೈದ್ಯರ ಮನೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ಡಾ.ಕೃಷ್ಣಕುಮಾರಿ ಅವರ ಮೇಲೆ ಹಲ್ಲೆ ನಡೆಸಿ ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ. ಕೆಲ ಸಮಯದ ಬಳಿಕ ಡಾ.ಕೇಶವ ಮನೆಗೆ ಬಂದಾಗ ಅವರ ಮೇಲೂ ಚಾಕಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ.

ಈ ವೇಳೆ ಭಯಗೊಂಡ ದಂಪತಿ ನಿಮಗೆ ಏನು ಬೇಕೋ ಅದನ್ನು ತೆಗೆದುಕೊಂಡು ಹೋಗಿ ನಮಗೇನು ಮಾಡಬೇಡಿ ಎಂದಿದ್ದಾರೆ. ಆ ವೇಳೆ ಒಬ್ಬಾತ ಬಚ್ಚಲು ಮನೆಗೆ ಹೋಗಿ ಕೈಕಾಲು ತೊಳೆದುಕೊಂಡು ಬಂದು ನಾನು ನಿತಿನ್. ಕೆಲಸ ಕೇಳಿಕೊಂಡು ನಿಮ್ಮ ಬಳಿ ಬಂದರೆ ನನಗೆ ಕೆಲಸ ಕೊಡದೆ ಏನೋ ಹೇಳಿ ಕಳುಹಿಸಿದ್ದೀರಿ, ಅದಕ್ಕೆ ಈ ರೀತಿ ಹಲ್ಲೆ ಮಾಡುತ್ತಿದ್ದೇನೆ ಎಂದು ಹೇಳಿದ.

ಅಲ್ಲದೆ ಪತ್ನಿಯ ಕುತ್ತಿಗೆಯಲ್ಲಿದ್ದ 64 ಗ್ರಾಂ ಚಿನ್ನದ ಸರ ಮತ್ತು 60 ಗ್ರಾಂನ ನಾಲ್ಕು ಚಿನ್ನದ ಬಳೆಗಳು, ಪತಿಯ ಐಫೋನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಡಾ.ಕೇಶವ್ ತಿಳಿಸಿದ್ದಾರೆ.

ಗಾಯಗೊಂಡಿರುವ ವೈದ್ಯ ಕೇಶವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್