ಶೇ.8ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಅಷ್ಟೇ: ಸಾರಿಗೆ ನೌಕರರೊಂದಿಗೆ ಸಂಧಾನದ ಮಾತೇ ಇಲ್ಲ ಎಂದ ಸಿಎಸ್ ರವಿ ಕುಮಾರ್ ಸ್ಪಷ್ಟನೆ
ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ * ಬಸ್‍ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ ಎಂದ ಅಧಿಕಾರಿ
ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ನಡೆಸಲು ಸಜ್ಜಾಗಿರುವ ಹಿನ್ನೆಲೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಾಲ್ಕು ನಿಗಮಗಳ ಎಂಡಿಗಳ ಜೊತೆ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡಲಾಗಿದೆ.
ಸಾರಿಗೆ ಇಲಾಖೆ ಎಸಿಎಸ್ ಅಂಜುಂ ಪರ್ವೇಜ್, ಕೆಎಸ್‍ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಾರಿಗೆ ನೌಕರರು ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗಬಾರದು ಎಂದು ಮನವಿ ಮಾಡುತ್ತೇವೆ. 9 ಬೇಡಿಕೆಗಳಲ್ಲಿ ಒಂದು ಬೇಡಿಕೆ ಬಿಟ್ಟು ಎಲ್ಲವನ್ನೂ ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.
ಸಾರಿಗೆ ನೌಕರರ 6ನೇ ವೇತನ ಆಯೋಗ ಶಿಫಾರಸು ಜಾರಿ ಮಾಡಲು ಆಗಲ್ಲ. ಶೇ.8ರಷ್ಟು ವೇತನ ಹೆಚ್ಚಳ ಮಾಡುತ್ತೇವೆ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಆಯೋಗದ ಅನುಮತಿಯನ್ನು ಕೇಳಿದ್ದೇವೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸಂಬಳ ಹೆಚ್ಚಳ ಮಾಡಲು ಆಗುತ್ತಿಲ್ಲ. ಪ್ರತಿಭಟನೆಗೆ ಹೋಗಬಾರದು ಎಂದು ಮನವಿ ಮಾಡಿದ್ದೇವೆ ಎಂದರು.
ಪ್ರತಿಭಟನೆಗೆ ಹೋದರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ. ಸಾರಿಗೆ ಪ್ರತಿಭಟನೆಯನ್ನು ಕಠಿಣವಾಗಿ ಡೀಲ್ ಮಾಡುತ್ತೇವೆ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಾತುಕತೆಗೆ ಹೋಗುವ ಪ್ರಶ್ನೆಯೇ ಇಲ್ಲ. ಬಸ್‌ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ಮಾ ಜಾರಿ ಬಗ್ಗೆ ಚರ್ಚೆ ಆಗುತ್ತಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಕೋವಿಡ್ ನಿಯಮದಂತೆ ರೂಲ್ಸ್ ಫಾಲೋ ಮಾಡಬೇಕು, ಇಲ್ಲ ವಿಪತ್ತು ನಿರ್ವಹಣಾ ಕಾಯ್ದೆಯಂತೆ ಕ್ರಮ ‘ನೋ ವರ್ಕ್ ನೋ ಪೇ’ ಜಾರಿ ಮಾಡುತ್ತೇವೆ. ಚುನಾವಣಾ ಆಯೋಗಕ್ಕೆ ನಿನ್ನೆಯೇ ಪತ್ರ ಬರೆದಿದ್ದೇವೆ. ಶೇ. 8 ಸಂಬಳ ಹೆಚ್ಚಳ ಮಾಡುತ್ತೇವೆ. ಆದರೆ ಅವರು ಅನುಮತಿ ಕೊಡಬೇಕು ಎಂದು ತಿಳಿಸಿದ್ದಾರೆ.
ಖಾಸಗಿ ವಾಹನಗಳ ಬಳಕೆ ಮ್ಯಾಕ್ಸಿಕ್ಯಾಬ್, ಖಾಸಗಿ ಬಸ್‍ಗಳು, ಸ್ಕೂಲ್ ಬಸ್‍ಗಳನ್ನು ಬಳಸಿಕೊಳ್ಳುತ್ತೇವೆ. ಎಲ್ಲ ವಾಹನಗಳ ಪ್ರಯಾಣ ದರ ಸರ್ಕಾರ ಫಿಕ್ಸ್ ಮಾಡಿದರೆ ಹೆಚ್ಚು ಕೇಳುವಂತಿಲ್ಲ ಎಂದಿದ್ದಾರೆ.
Related
You Might Also Like
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...
ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು
ಹಾಸನ: ಬೆಳೆದು ನಿಂತಿದ್ದ ಭತ್ತವನ್ನು ಕಟಾವು ಮಾಡಿ ಗದ್ದೆಯಲ್ಲೇ ಚೀಲಕ್ಕೆ ತುಂಬಿಟ್ಟಿದ್ದ ಸುಮಾರು 60 ಕ್ವಿಂಟಲ್ ಭತ್ತವನ್ನು ಕಾಡಾನೆಗಳ ಹಿಂಡು ತಿಂದುಹಾಕಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟಮಾಡಿರುವ...
ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು
ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ...
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು
ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ....
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್- ಚಾಲಕರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ...
KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ
ಬೆಂಗಳೂರು: 2024ರ ಜನವರಿ ಒಂದರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿ 1ರಿಂದ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳುಗಳ ಹಿಂಬಾಕಿ ಕೊಡುವಂತೆ...
ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್
ಬೆಂಗಳೂರು: ಕಂಟ್ರ್ಯಾಕ್ಟರ್ಗೆ ಬಲೆ ಬೀಸಿ ಹನಿ ಟ್ರ್ಯಾಪ್ ಮಾಡಿರೋ ಸುಂದರಿಯ ಗ್ಯಾಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಂಟ್ರ್ಯಾಕ್ಟರ್ ರಂಗನಾಥ್ ಎಂಬುವರು ಯುವತಿ ನಯನಾ...
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ
ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ...
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...