NEWSನಮ್ಮರಾಜ್ಯರಾಜಕೀಯ

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಆಮ್ ಆದ್ಮಿ ಪಕ್ಷ ಸ್ಪರ್ಧೆ : ಜಗದೀಶ್ ವಿ. ಸದಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಂಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ 312 ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ 35 ವಾರ್ಡುಗಳಲ್ಲಿಯೂ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಚುನಾವಣಾ ಆಯೋಗ ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ ದೊಡ್ಡಬಳ್ಳಾಪುರ, ರಾಮನಗರ, ಚನ್ನಪಟ್ಟಣ, ಶಿರಾ, ಭದ್ರಾವತಿ, ಮಡಿಕೇರಿ ಹಾಗೂ ಬೀದರ್ ಸೇರಿದಂತೆ 7 ನಗರಸಭೆಗಳು, ವಿಜಯಪುರ, ಬೇಲೂರು ಹಾಗೂ ತರೀಕೆರೆ ಸೇರಿ 3 ಪುರಸಭೆಗಳು ಮತ್ತು ಗುಡಿಬಂಡೆ, ತೀರ್ಥಹಳ್ಳಿ ಸೇರಿ 2 ಪಟ್ಟಣ ಪಂಚಾಯಿತಿಗಳಿಗೆ ಈಗಾಗಲೇ ಚುನಾವಣೆಯನ್ನು ಘೋಷಿಸಿದೆ. ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಏ.27 ರಂದು ಮತದಾನದ ನಡೆಯಲಿದೆ ಎಂದು ಪ್ರಕಟಿಸಿದೆ.

ಹೀಗಾಗಿ ಪರಂಪರಾನುಗತ ಪಕ್ಷಗಳ ವಿರುದ್ಧ ಸಮರ್ಥ ಹಾಗೂ ಗೆಲ್ಲುವ ಅಭ್ಯರ್ಥಿಗಳನ್ನು ನಮ್ಮ ಪಕ್ಷದಿಂದ ಹಾಕುವ ಮೂಲಕ ಅಧಿಕೃತವಾಗಿ ಚುನಾವಣೆ ಕಣಕ್ಕಿಳಿಯಲಿದ್ದೇವೆ ಎಂದು ತಿಳಿಸಿದರು. ಎದುರಿಸಲಾಗುವುದು ಎಂದು

ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಆಮ್ ಆದ್ಮಿ ಪಕ್ಷವು ಈಗಾಗಲೇ ಸದೃಢವಾಗಿ ಸಂಘಟಿತವಾಗಿದೆ. ದೆಹಲಿ ಮಾದರಿಯ ಪಾರದರ್ಶಕ ಹಾಗೂ ಭ್ರಷ್ಟ ಮುಕ್ತ ಆಡಳಿತವನ್ನು ಇಲ್ಲಿನ ಸ್ಥಳೀಯ ಜನತೆಯು ಬಯಸುತ್ತಿದ್ದು ಆಮ್ ಆದ್ಮಿ ಪಕ್ಷದ ಉಮೇದುವಾರರು ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿ ಕಳುಹಿಸಿತ್ತಾರೆಂಬ ವಿಶ್ವಾಸ ನಮ್ಮಲ್ಲಿದೆ ಎಂದರು.

ಈಗಾಗಲೇ ರಾಜ್ಯ ನಾಯಕತ್ವ ಎಲ್ಲ ಕ್ಷೇತ್ರಗಳಲ್ಲಿಯೂ ಸಂಚರಿಸಿ ಅಲ್ಲಿನ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಹಲವು ಸಭೆಗಳನ್ನು ಮಾಡುವ ಮೂಲಕ ಸಕಲ ಪ್ರಚಾರ ಕಾರ್ಯಕ್ರಮಗಳ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಜಗದೀಶ್ ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...