NEWSನಮ್ಮರಾಜ್ಯರಾಜಕೀಯ

ಅರ್ಥ ಅಪಾರ್ಥಗಳ ನಡುವೆ: ಕೋಡಿಹಳ್ಳಿ ಅವರ ಪತ್ರಿಕಾ ಹೇಳಿಕೆಗೆ ಸ್ಪಷ್ಟೀಕರಣ ಕೊಟ್ಟ ಗೃಹ ಸಚಿವರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಇಂದು 13ನೇ ದಿನ ಪೂರೈಸಿದ್ದು, ಈ ನಡುವೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್‌ ಅವರೊಂದಿಗೆ ಮುಷ್ಕರ ಕೈಬಿಡುವ ಸಂಬಂಧ ಮಾತನಾಡಿದ್ದು, ಈ ಇಬ್ಬರ ನಡುವೆ ನಡೆದ ಮಾತುಕತೆಯಲ್ಲಿ ಸಚಿವರು ಯಾವ ಭರವಸೆಯನ್ನು ಕೊಟ್ಟಿಲ್ಲ.

ಅದನ್ನೇ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಹೇಳಿದ್ದಾರೆ. ಆದರೆ ಕೋಡಿಹಳ್ಳಿ ಅವರು ಪತ್ರಿಕಾ ಹೇಳಿಕೆ ನೀಡಿದಂತೆ ನಾನು ಮುಷ್ಕರ ಮುಂದುವರಿಸಿ ಎಂದು ಹೇಳಿಲ್ಲ. ಜತೆಗೆ ಯಾವುದೇ ಭರವಸೆ ಕೊಟ್ಟಿಲ್ಲ ಎಂದು ಬೊಮ್ಮಾಯಿ ಅವರು ಬಿಡುಗಡೆ ಮಾಡಿರುವ ಪತ್ರಿಕೆ ಹೇಳಿಕೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.

ಆದರೆ, ಈ ಇಬ್ಬರೂ ಮಾತನಾಡಿರುವ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವುದು ಒಂದೇ ರೀತಿ ಇದೆ. ಅಂದರೆ, ಆರನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಗೃಹ ಸಚಿವರು ಯಾವುದೇ ಭರವಸೆ ಕೊಟ್ಟಿಲ್ಲ. ಬದಲಿಗೆ ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು ಹಾಗೆಯೇ ಸಾರಿಗೆ ಸಚಿವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಇನ್ನು 2ದಿನದಲ್ಲಿ ಅವರೊಂದಿಗೆ ಮಾತನಾಡಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.

ಇದನ್ನೇ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಹೇಳಿದ್ದಾರೆ. ಆದರೂ ಸಚಿವರು ಏಕೆ ಸ್ಪಷ್ಟೀಕರಣ ನೀಡಿದರು. ಶಾಂತಿಯುತವಾಗಿ ಮುಷ್ಕರ ಮುಂದುವರಿಸಿ ಎಂದು ಹೇಳಿಲ್ಲ ಎಂದಷ್ಟೆಯೇ ಎಂದು ಹೇಳಲು ಈ ಸ್ಪಷ್ಟೀಕರಣ ನೀಡಿದ್ದಾರೆ ಇಲ್ಲ ಈ ಇಬ್ಬರ ನಡುವೆ ನಡೆದ ರಹಸ್ಯವನ್ನು ಬಹಿರಂಗ ಪಡಿಸಲು ಹೇಳಿದ್ದಾರ ಎಂಬುವುದು ನೌಕರರಿಗೆ ತಿಳಿಯದಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್‌ ಅವರ ಪತ್ರಿಕಾ ಹೇಳಿಕೆ 

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಪತ್ರಿಕಾ ಹೇಳಿಕೆ

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...