NEWSನಮ್ಮರಾಜ್ಯರಾಜಕೀಯ

ಧಾರವಾಡದಲ್ಲಿ ಸಾರಿಗೆ ನೌಕರರ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಧಾರವಾಡ: ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೂಟದ ಗೌರವಾಧ್ಯಕ್ಷ, ನ್ಯಾಯವಾದಿ ಪಿ.ಎಚ್. ನೀರಲಕೇರಿ ಅವರ ನೇತೃತ್ವದಲ್ಲಿ ಜರುಗುತ್ತಿದ್ದ ಶಾಂತಿಯುತ ಹೋರಾಟವನ್ನು ಹತ್ತಿಕ್ಕಲು ಪೊಲೀಸರು ಬಂಧಿಸಿದ್ದಾರೆ.

ನೌಕರರೇ ಇನ್ನಾದರೂ ಎಚ್ಚೆತ್ತುಕೊಳ್ಳಿ. ನಮ್ಮ ಬೇಡಿಕೆ ಈಡೇರುವವರಗೂ ಹೋರಾಟವನ್ನು ನಿಲ್ಲಿಸದಿರಿ ಎಂದು ಬಂಧನಕ್ಕೊಳಗದ ನೌಕರರು ಘೋಷಣೆ ಕೂಗಿದ್ದಾರೆ.

ಈ ನಡುವೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 14ನೇ ದಿನವೂ ಮುಂದುವರಿದಿದ್ದು, ಇಂದು ಕೋಲಾರದಲ್ಲಿ ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ನೌಕರರ ಮೇಲೆ ಪೊಲೀಸರು ಲಾಠಿ ಬೀಸುವ ಮೂಲಕ ಸತ್ಯಾಗ್ರಹ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿದ್ದು, ಏಕಾಏಕಿ ಲಾಠಿಚಾರ್ಜ್‌ ಮಾಡಲು ನಿಮಗೆ ಏನು ಹಕ್ಕಿದೆ. ನಾವೇನು ತಪ್ಪು ಮಾಡಿದ್ದೇವೆ ಎಂದು ಈ ರೀತಿ ನಡೆದುಕೊಳ್ಳುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಇನ್ನು ರಾಜ್ಯದ ಹಲವು ಸಾರಿಗೆ ಡಿಪೋಗಳ ಬಳಿ ಶಾಂತಿಯುತವಾಗಿ ಸತ್ಯಾಗ್ರಹ ನಡೆಸುತ್ತಿದ್ದ ಸಾವಿರಾರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆಳವಣಿಗೆಯ ನಡುವೆಯೂ ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಾವಿರಾರು ನೌಕರರು ಕೂಗಿ ಹೇಳುತ್ತಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...