NEWSನಮ್ಮರಾಜ್ಯರಾಜಕೀಯ

ಶಕುನಿ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಸರ್ವನಾಶ ಮಾಡಲು ಹೊರಟಿದ್ದಾರೆ: ಮಾಜಿ ಸಚಿವ ಜಿಟಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ಸರ್ವನಾಶವಾಯಿತು. ಇದೀಗ ಮೈಸೂರಿನಲ್ಲಿ ಶಕುನಿ ಮತ್ತು ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿ ಟಿ ದೇವೇಗೌಡ ಆರೋಪಿಸಿದ್ದಾರೆ

ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೈಕೇಯಿ ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳಬೇಕಾಯಿತು. ಅದರಂತೆ ನನ್ನನ್ನು ಮೈಮುಲ್‌ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿಡಿ ಕಿಡಿಕಾರಿದರು.

ಮಾಜಿ ಸಚಿವ ಶಾಸಕ ಸಾರಾ ಮಹೇಶ್ ಅವರನ್ನು ಶಕುನಿಗೆ ಹೋಲಿಸಿದ ಜಿಟಿಡಿ ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳಿ ನನ್ನನ್ನು ಅವಮಾನ ಮಾಡುತ್ತೀರಿ. ನೀವು ನನ್ನನ್ನು ಎಲ್ಲೂ ಹೋಗದಂತೆ ಜೆಡಿಎಸ್ ನಲ್ಲಿ ಕೂಡಿಹಾಕಿ ಬೀಗ ಹಾಕುವ ಯತ್ನ ಯಾಕೆ ಮಾಡುತ್ತಿದೀರಿ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಎಚ್‌ಡಿ ಕೋಟೆಯಲ್ಲಿ ಮೈಮುಲ್‌ ಚುನಾವಣೆ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ ಅವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿಟಿ ದೇವೇಗೌಡ ಎನ್ನುವ ಆಲದ ಮರವನ್ನು ಬುಡಸಮೇತ ಕಿತ್ತು ಹಾಕುತ್ತೇನೆ ಎಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ಆರೋಪಿಸಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್