NEWSನಮ್ಮರಾಜ್ಯರಾಜಕೀಯ

ನಾಳೆ ಬೆಳಗಾವಿ ಉಪಸಮರ: ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಜ್ಜು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದ್ದು, ಉಪಚುನಾವಣೆಗೆ 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುಗಮ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 2,566 ಮತಗಟ್ಟೆಗಳ ಪೈಕಿ 587 ಅತಿಸೂಕ್ಷ್ಮ ಮತ್ತು 118 ಸೂಕ್ಷ್ಮ ಎಂದು ಗುರುತಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಶುಕ್ರವಾರ ತಿಳಿಸಿದ್ದಾರೆ.

ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅನುಕಂಪದ ಮತಗಳನ್ನು ಪಡೆಯಲು ಬಿಜೆಪಿ, ಸುರೇಶ್ ಅಂಗಡಿಯವರ ಪತ್ನಿ ಎಂ.ಎಸ್.ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದ್ದರೆ, ಹಾಲಿ ಶಾಸಕ ಮತ್ತು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಕ್ಷೇತ್ರದಲ್ಲಿ ಒಟ್ಟು 18,13,567 ಮತದಾರರಿದ್ದಾರೆ.

ಅಧಿಕಾರಿಗಳು 1283 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಹದಿನಾರು ‘ಸಖಿ’ (ಮಹಿಳಾ ಮತದಾನ ಕೇಂದ್ರಗಳು) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸೂಕ್ಷ್ಮವಲ್ಲದ ಮತಗಟ್ಟೆಗಳಿಗೆ ಒಟ್ಟು 200 ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದ್ದು, 159 ವಿಡಿಯೋ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದೆ. ಒಟ್ಟು 132 ಎಎಸ್‌ಐ, 72 ಸಿಐಎಸ್‌ಎಫ್ ಸಿಬ್ಬಂದಿ, 977 ಹೆಡ್ ಕಾನ್‌ಸ್ಟೆಬಲ್‌ಗಳು, 1,406 ಪೊಲೀಸ್ ಕಾನ್‌ಸ್ಟೆಬಲ್‌ಗಳು ಮತ್ತು 905 ಗೃಹರಕ್ಷಕರನ್ನು ನಿಯೋಜಿಸಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ