Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಕದ್ದು ಮುಚ್ಚಿ ಮಾರಾಟ ಮಾಡುವುದು ಬಿಜೆಪಿ ಸಂಸ್ಕೃತಿ : ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಎಸ್‍ವೈ ಸರ್ಕಾರ ಮುಂದಾಗಿರುವ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಈ ನಿರ್ಧಾರವನ್ನು ವಿರೋಧಿಸಿದ್ದ ಬಿಜೆಪಿಯ ಪ್ರಮುಖರು ಸೇರಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಅವರ ಮುಂದೆ ಸಾಲು ಸಾಲು ಪ್ರಶ್ನೆಗಳನ್ನಿಟ್ಟಿದ್ದಾರೆ.

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಕಿಡಿಕಾರಿದ್ದಾರೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು’ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ ಎಂದು ಅಂದಿನ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದರು.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ