Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ಕಪ್ಪು ಶಿಲೀಂಧ್ರ ರೋಗವನ್ನು ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು: ಎಚ್‌ಡಿಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು ‘1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ’ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇಪದೆ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆಗೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ