NEWSನಮ್ಮರಾಜ್ಯರಾಜಕೀಯ

ಮಾರಕ ರೋಗ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ Amphotericin B ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ‘ರಾಕ್ಷಸ ಅಲಸ್ಯ’ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ Amphotericin B ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ ಮತ್ತು ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ ಎಂದು ಕೇಳಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ ಎಂದು ಪ್ರಶ್ನಿಸಿದ್ದಾರೆ.

ಆಕ್ಸಿಜನ್‌, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ ‘ಇಲ್ಲ’ ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ ಎಂದು ಸಲಹೆ ನೀಡಿದ್ದಾರೆ.

ಕೇಂದ್ರ ಸದಾ ತಾರತಮ್ಯ ಮಾಡುತ್ತದೆ. ಉದಾ: ರಾಜ್ಯದಲ್ಲಿ ಒಬ್ಬ ಕೋವಿಡ್‌ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್‌. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್‌ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್‌ ಮೋಸ. ಕಪ್ಪು ಶಿಲೀಂದ್ರ ಔಷಧದಲ್ಲೂ ಇದು ಮುಂದುವರಿಯುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...