NEWSನಮ್ಮರಾಜ್ಯರಾಜಕೀಯ

ವ್ಯಾಕ್ಸಿನ್‌ಗಾಗಿ ಕಾಂಗ್ರೆಸ್ ಶಾಸಕರು, ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.100 ಕೋಟಿ ನೀಡಲು ತೀರ್ಮಾನ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿ ರೂ.ಗಳಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿನ ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ನಾವು ಹಣ ನೀಡುತ್ತಿದ್ದೇವೆ ಎಂದರು.

ದೇಶದ ಪ್ರತಿಯೊಬ್ಬರಿಗೂ ಕೊರೊನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೊನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಜನ ವ್ಯಾಕ್ಸಿನ್ ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಕಿಡಿಕಾರಿದರು.

ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ ಎಂದರು.

ಕೋವಿಶೀಲ್ಡ್ ವ್ಯಾಕ್ಸಿನ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಪದೇಪದೇ ತನ್ನ ಮಾರ್ಗಸೂಚಿಯನ್ನು ಬದಲಾವಣೆ ಮಾಡುತ್ತಿದೆ. ಮೊದಲ ಹಾಗೂ ಎರಡನೇ ಡೋಸ್ ನಡುವಿನ ಅಂತರ 6-8 ವಾರ ಎಂದು ಈ ಹಿಂದೆ ಹೇಳಿತ್ತು, ಈಗ ಅದನ್ನು 12 ರಿಂದ 16 ವಾರಗಳಿಗೆ ಏರಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದರು.

ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇಪದೇ ಬದಲಾವಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್‌ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಕೇಂದ್ರ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು