NEWSನಮ್ಮರಾಜ್ಯ

ಮೇ 23ರವರೆಗೆ ಸಬ್‌ರಿಜಿಸ್ಟ್ರಾರ್ ಕಚೇರಿಗಳು ಬಂದ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24ರವರೆಗೆ ಲಾಕ್‌ಡೌನ್ ಜಾರಿಮಾಡಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಸಬ್‌ರಿಜಿಸ್ಟ್ರಾರ್ ಕಚೇರಿಗಳು ಕೂಡ ಸ್ಥಗಿತಗೊಳಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮೇ 23ವರೆಗೆ ರಾಜ್ಯದ ಎಲ್ಲಾ ಜಿಲ್ಲಾ ನೋಂದಣಿ ಮತ್ತು ಉಪನೋಂದಣಿ ಕಚೇರಿಗಳಲ್ಲಿ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಆದರೆ, ಸಬ್‌ ರಿಜಿಸ್ಟ್ರಾರ್ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿರಬೇಕು ಎಂದು ತಿಳಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿದ್ದರೂ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಜನರು ಸಹ ನೋಂದಣಿಗೆ ಬರುತ್ತಿದ್ದರು. ನೋಂದಣಿ ಪ್ರಕ್ರಿಯೆ ಸಂದರ್ಭದಲ್ಲಿ ಅನಿವಾರ್ಯವಾಗಿ ಬಯೋ ಮೆಟ್ರಿಕ್ ಮಾಡಿಸಲು, ಫೋಟೊ ತೆಗೆಯಲು ಮಾಸ್ಕ್ ತೆಗೆಯಬೇಕಾಗಿತ್ತು. ಇದರ ವಿರುದ್ಧ ಸಾರ್ವಜನಿಕರಲ್ಲಿ ಮತ್ತು ಇಲಾಖೆ ಅಧಿಕಾರಿಗಳು-ಸಿಬ್ಬಂದಿಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಕೊರೊನಾ ಸೋಂಕಿನಿಂದಾಗಿ ಸಬ್‌ರಿಜಿಸ್ಟ್ರಾರ್ ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು, ಮೇ 23ರವರೆಗೆ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...