CrimeNEWSನಮ್ಮರಾಜ್ಯ

ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್‌ ಅಪಘಾತ: ಹಲವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಾಲಕನ ನಿಯಂತ್ರಣದ ತಪ್ಪಿದ ಬಿಎಂಟಿಸಿ ಬಸ್‌ ರಸ್ತೆ ಪಕ್ಕದ ಆಲದ ಮರಕ್ಕೆ ಡಿಕ್ಕಿ ಹೊಡೆದು ಬಸ್ಸಿನ ಮುಂದಿನ ಗ್ಲಾಸ್‌ ಪುಡಿಪುಡಿಯಾಗಿ, ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಆರನೇ ವೇತನ ಶಿಫಾರಸು ಜಾರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ.

ಈ ಹಿನ್ನೆಲೆಯಲ್ಲಿ ಖಾಸಗಿ ಚಾಲಕರು ಮತ್ತು ನಿರ್ವಾಹಕರನ್ನು ಕೆಲಸಕ್ಕೆ ಕಳುಹಿಸುವ ಮೂಲಕ ಸಾರಿಗೆ ಇಲಾಖೆ, ಬಿಎಂಟಿಸಿ ಅಧಿಕಾರಿಗಳು ಮತ್ತು ಸರ್ಕಾರ ಜನರ ಜೀವದ ಜತೆ ಆಟವಾಡುತ್ತಿದೆ. ಇದರಿಂದಲೇ ಇಂದು ಅಪಘಾತವಾಗಿದ್ದು ಹಲವರು ಗಾಯಗೊಂಡಿದ್ದಾರೆ ಎಂದು  ಸ್ಥಳದಲ್ಲಿ ಇದ್ದ ಜನರು ಆಕ್ರೋಶಗೊಂಡು ಚಾಲಕನಿಗೆ ಥಳಿಸಲು ಮುಂದಾದ ಘಟನೆಯು ನಡೆಯಿತು.

ಇನ್ನು ಅಪಘಾತದಿಂದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಹೆಸರೇಳಲಿಚ್ಛಿಸದ ಅಧಿಕಾರಿಯೊಬ್ಬರು ವಿಜಯಪಥಕ್ಕೆ ಮಾಹಿತಿ ನೀಡಿದ್ದಾರೆ.

ಯಾರಿಗೂ ಪ್ರಾಣದ ಭಯವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. ಆದರೆ, ಜನರು ಇದರಿಂದ ಆಕ್ರೋಶಗೊಂಡಿದ್ದು, ನೌಕರರು ಗೌರವಯುತವಾಘಿ ಬದಕುಲು ಬದುಕಲು ಬೇಕಾದ ವೇತನ ನೀಡುವಲ್ಲಿ ತಾರತಮ್ಯ ಮಾಡಿದ್ದು ಅಲ್ಲದೆ ಈ ರೀತಿ ಬಸ್‌ ಚಾಲನೆ ಮಾಡಲು ಬಾರದವರ ಕೈಗೆ ಬಸ್‌ ಕೊಟ್ಟು ಜನರ ಪ್ರಾಣದೊಂದಿಗೆ ಸಿಎಂ ಯಡಿಯೂರಪ್ಪ ಮತ್ತ ಉಸಾರಿಗೆ ಸಚಿವ ಲಕ್ಷ್ಮಣ ಸವದಿ ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ನೌಕರರ ಜತೆ ಸಂಧಾನ ಸಭೆ ನಡೆಸಿ ಶೀಘ್ರದಲ್ಲೇ ಅವರ ಬೇಡಿಕೆ ಈಡೇರಿಸದೆ ಇಂಥ ಅನಾಹುತಗಳಿಗೆ ಕಾರಣವಾಗುವುದನ್ನು ಮುಂದುವರಿಸಿದರೆ ನಾವು ಕೂಡ ರಸ್ತೆಗಿಳಿಯಬೇಕಾಗುತ್ತಿದೆ ಎಂಬ ಎಚ್ಚರಿಕೆ ಸಂದೇಶವನ್ನು ಸಿಎಂಗೆ ರವಾನಿಸಿದರು.

 

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?