ಮೈಸೂರು: ಕೇಂದ್ರ ಸರ್ಕಾರದಿಂದ ಅನುದಾನ ತರಲು ಬಿಜೆಪಿಯಲ್ಲೇ ಬೆಳೆದ ಬಿ.ಎಸ್. ಯಡಿಯೂರಪ್ಪ ಅವರ ಕೈಯಲ್ಲಿ ಆಗಲಿಲ್ಲ. ಇನ್ನು ಜನತಾದಳದಿಂದ ಹೋದ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಆಗುತ್ತದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಜನತಾದಳದಿಂದ ಬಂದವರು ಮುಖ್ಯಮಂತ್ರಿಯಾಗಿದ್ದಾರೆ ಇವರ ಮಾತನ್ನು ಬಿಜೆಪಿ ಹೈಕಮಾಂಡ್ ಕೇಳುವುದು ಅನುಮಾನ ಎಂದು ವ್ಯಕ್ತಪಡಿಸಿದರು.
ಸರ್ಕಾರ ಕೊರೊನಾ ಮೂರನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಬೇಕು, ಇಲ್ಲವಾದರೆ ಸಂಕಷ್ಟ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಸಚಿವರು ಇಲ್ಲದಿದ್ದರೂ ಅಧಿಕಾರಿಗಳ ಮೂಲಕ ನಿರ್ವಹಣೆ ಮಾಡಬೇಕು. ಸಚಿವರು ಇದ್ದರೆ ಅವರೇನು ಗಡಿಗೆ ಬೀಗ ಹಾಕಲು ಸಾಧ್ಯವಿಲ್ಲ. ಅಧಿಕಾರಿಗಳ ಮೂಲಕ ಕೆಲಸ ಮಾಡಬೇಕು. ಏಕ ವ್ಯಕ್ತಿಯಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ ಎಂದರು.
ಇನ್ನು ಆದಷ್ಟು ಬೇಗ ಸಚಿವ ಸಂಪುಟ ರಚನೆಯಾಗಬೇಕು. ಕೇರಳ, ಮಹಾರಾಷ್ಟ್ರದಿಂದ ಬರುವವರನ್ನು ತಡೆಯಬೇಕು ಎಂದು ತಿಳಿಸಿದರು.
ಕಳೆದ ಬಾರಿ ಉಂಟಾದ ನೆರೆ ಪರಿಹಾರವನ್ನು ಇನ್ನೂ ನೀಡಿಲ್ಲ. ಮನೆ ಬಿದ್ದವರಿಗೆ 10000 ರೂ.ಗಳೂ ಪರಿಹಾರ ಬಂದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಂಡ್ಯ: ಬಸ್‌ನಲ್ಲಿಕಳೆದುಕೊಂಡಿದ್ದ 50,500 ರೂ. ಹುಡುಕಿಕೊಟ್ಟು ಪ್ರಾಮಾಣಿಕತೆ ಮೆರೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು