Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ಆಡಳಿತದಲ್ಲಿ ಕಮಿಷನ್ ದಂಧೆ ಭರ್ಜರಿ: ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತದಲ್ಲಿ ಕಮಿಷನ್ ದಂಧೆ ಭರ್ಜರಿಯಾಗಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರ ಗಮನಕ್ಕೆ ತಾರದೆ ಅವರ ಇಲಾಖೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಮಿಷನ್ ಹೊಡೆಯುವ ವಿಷಯದಲ್ಲಿ ವಿಜಯೇಂದ್ರ ಮತ್ತು ಈಶ್ವರಪ್ಪ ನಡುವೆ ಜಗಳವಾಗಿದೆ. @BJP4Karnataka ಅವರ ಭ್ರಷ್ಟ ಆಡಳಿತದಲ್ಲಿ ಕಮಿಷನ್ ದಂಧೆ 30-35 ಪರ್ಸೆಂಟ್ ಗಡಿ ದಾಟಿದೆ ಎಂದು ದೂರಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ @BJP4Karnataka ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ.‌ ಈ ಕುರಿತು @BSYBJP ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಯಡಿಯೂರಪ್ಪ ಅವರನ್ನು ಟೀಕಿಸಿದ್ದಕ್ಕಾಗಿ ಕೆಲ ಸಚಿವರು ನನ್ನ ವಿರುದ್ಧ ಹೇಳಿಕೆ ನೀಡಿದ್ದಾರೆ. @BJP4Karnataka ಶಾಸಕ ಬಸವನಗೌಡ ಯತ್ನಾಳ್ ಅವರು ದಿನಬೆಳಗಾದರೆ @BSYBJP ವಿರುದ್ಧ ಟೀಕೆ ಮಾಡುತ್ತಾರೆ. ರಾಜ್ಯ ಸರ್ಕಾರದ ಸಚಿವರಿಗೆ ಧೈರ್ಯವಿದ್ದರೆ ಮೊದಲು ಯತ್ನಾಳ್ ಅವರ ಬಾಯಿ ಮುಚ್ಚಿಸಲಿ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ