Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ರಮೇಶ್‌ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ: ಆಕ್ಷೇಪಾರ್ಹ ಹೇಳಿಕೆಗೆ ಕ್ಷಮೆ ಕೇಳುವಂತೆ ಪಟ್ಟು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದ ಸಂಬಂಧ ಶನಿವಾರ ಸಂತ್ರಸ್ತ ಯುವತಿಯ ಪಾಲಕರು ಮಾಧ್ಯಮಗಳ ಮುಂದೆ ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ನೇರ ಆರೋಪ ಮಾಡಿದ್ದು, ಈ ಬೆನ್ನಲ್ಲೇ ರಮೇಶ್‌ ಜಾರಕಿಹೊಳಿ ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶನಿವಾರ ಸಂಜೆ ವೇಳೆಗೆ ಹೊಸ ಬಾಂಬ್‌ ಸಿಡಿಸುತ್ತೇನೆ ಎಂದು ಹೇಳಿದ್ದ ರಮೇಶ್‌ ಅದರಂತೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನನ್ನ ವಿರುದ್ಧ ರಾಸಲೀಲೆ ಸಿಡಿ ಷಡ್ಯಂತ್ರ ನಡೆಸಿರುವ ಡಿಕೆಶಿ ಒಬ್ಬ ಗಾಂಡು. ನಾನು ಗಂಡಸು. ರಾಜಕೀಯಕ್ಕೆ ಶಿವಕುಮಾರ್‌ ನಾಲಾಯಕ್ಕು ಎಂದು ಗಂಭೀರ ಆರೋಪ ಮಾಡಿದ್ದರು.

ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಪದ ಪ್ರಯೋಗ ಮಾಡಿರುವ ರಮೇಶ್‌ ಜಾರಕಿಹೊಳಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಸದಾಶಿವನಗರದಲ್ಲಿರುವ ರಮೇಶ್‌ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವೇಳೆ ಕೆಲ ಕಾರ್ಯಕರ್ತರನ್ನು ಪೊಲೀಸಿದ್ದರು. ಆದರೆ , ಅದನ್ನು ಲೆಕ್ಕಿಸದೆ ಇನ್ನಷ್ಟು ಮಂದಿ ರಕ್ಷ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಇನ್ನು ಯಾವುದೇ ಅನುಮತಿ ಪಡೆಯದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪೊಲೀಸರು ರಕ್ಷ ರಾಮಯ್ಯ ಅವರನ್ನು ಬಂಧಿಸಿದ್ದಾರೆ. ಈ ನಡುವೆ ರಮೇಶ್‌ ಅವರನ್ನು ಬಂಧಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ.

ಡಿಕೆಶಿ ಮನೆಗೆ ಕಾರ್ಯಕರ್ತರ ರಕ್ಷಣೆ
ಇನ್ನು ಬಿಜೆಪಿ ಕಾರ್ಯಕರ್ತರು ಸದಾಶಿವ ನಗರದಲ್ಲಿರುವ ಡಿಕೆಶಿ ಮನೆ ಮುಂದೆ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎಂದು ಕೈ ಕಾರ್ಯಕರ್ತರು ಶಿವಕುಮಾರ್‌ ಮನೆಗೆ ಭದ್ರತೆ ಒದಗಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಮಂಡ್ಯದಲ್ಲೂ ಅಸಭ್ಯ ಪದ ಬಳಕೆ ಮಾಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಕೈ ಕಾರ್ಯಕರ್ತರು ಅವರು ಹೇಳಿಕೆ ವಾಪಸ್‌ ಪಡೆಯುತ್ತಿದ್ದೇನೆ ಎಂದು ಹೇಳುವುದು ಬೇಕಿಲ್ಲ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮಂಡ್ಯದಲ್ಲೂ ರಮೇಶ್‌ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ