NEWSನಮ್ಮರಾಜ್ಯರಾಜಕೀಯ

ಸತತವಾಗಿ ಸಿಡಿ ಸಂತ್ರಸ್ತೆಯ ವಿಚಾರಣೆ, ಆರೋಪಿಗೆ ವಿಶ್ರಾಂತಿ: ಕಾಂಗ್ರೆಸ್‌ ವಾಗ್ದಾಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪೊಲೀಸರು ಸತತವಾಗಿ ಸಿಡಿ ಸಂತ್ರಸ್ತೆಯ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಆರೋಪಿಗೆ ಮಾತ್ರ ವಿಶ್ರಾಂತಿ ಪಡೆಯಲು ಬಿಟ್‌೨ಟಿದ್ದಾರೆ. ಇದು ಯಾವ ನ್ಯಾಯ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಈ ಕುರಿತು ಸೋಮವಾರ ಮುಂಜಾನೆಯ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ ಎಂದು ಕಿಡಿಕಾರಿದೆ.

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.
ಆರೋಪಿಯ ಮೊಬೈಲ್‌ನ್ನು ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ, ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ! ಎಂದು ಕಾಂಗ್ರೆಸ್‌ ಪೊಲೀಸರಿಗೂ ಕುಟುಕಿದೆ.

ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲ ಮೂಲಕ ಕಳಿಸಿಕೊಡುತ್ತಾರೆ ಪೊಲೀಸರು. ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದಂತೆ ಸತತ ವಿಚಾರಣೆ ನಡೆಸುತ್ತಾರೆ. ಆರೋಪಿಯನ್ನು ಕರೆದುಕೊಂಡು ಹೋಗಿ ಮಹಜರು ಮಾಡುವ ಬದಲಿಗೆ ಸಂತ್ರಸ್ತೆಯನ್ನು ಕಾಡಿಸಿ ಮಹಜರು ನಡೆಸಲಾಗುತ್ತಿದೆ ಎಂದು ಆರೋಪ ಮಾಡಿದೆ.

ಆರೋಪಿಯ ಕುಟುಂಬ, ಆರೋಪಿ ವಾಸಿಸುತ್ತಿದ್ದ ಸ್ಥಳ, ಬಳಸುತ್ತಿದ್ದ ಮೊಬೈಲ್ ಮುಂತಾದವುಗಳನ್ನು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ಆದರೆ ಇಲ್ಲಿ ಎಲ್ಲವೂ ಉಲ್ಟಾ, ದೂರು ನೀಡಿದ ಸಂತ್ರಸ್ತೆಯನ್ನೇ ಆರೋಪಿ ಎನ್ನುವಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದೆ.

ಆರೋಪಿಯ ಕುಟುಂಬದ ವಿಚಾರಣೆ ಮಾಡುವ ಬದಲಿಗೆ ಸಂತ್ರಸ್ತೆಯ ಕುಟುಂಬದ ವಿಚಾರಣೆ. ಆರೋಪಿಯ ದೂರಿನಲ್ಲಿ ಸಂತ್ರಸ್ತೆಯ ಹೆಸರಿಲ್ಲದಿದ್ದರೂ ಯುವತಿಯೇ ಆರೋಪಿ ಎಂಬಂತೆ ವಿಚಾರಣೆ. ಸಂತ್ರಸ್ತೆಯ ದೂರಿನಲ್ಲಿ ಆರೋಪಿ ಹೆಸರು ನೇರವಾಗಿ ಉಲ್ಲೇಖವಿದೆ, ಆದರೂ ಬಂಧನವಿಲ್ಲ, ಸಮರ್ಪಕ ವಿಚಾರಣೆಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಆರೋಪಿಯನ್ನು ಬಂಧಿಸದೇ ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ. ಸ್ವತಃ ಸಿಎಂ ತನಿಖೆ ನಡೆಸದೆ ಅವರದು ತಪ್ಪಿಲ್ಲ ಎಂದು ಕ್ಲೀನ್ ಚಿಟ್ ನೀಡುತ್ತಾರೆ. ನಾವೆಲ್ಲ ಆರೋಪಿ ಬೆಂಬಲಕ್ಕಿದ್ದೇವೆ ಎಂದು ಹಲವು ಸಚಿವರು ಹೇಳುತ್ತಾರೆ. ಇದೆಲ್ಲವೂ ಆರೋಪಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎನ್ನಲು ನಿದರ್ಶನ ಅಲ್ಲವೇ ಇದನ್ನು ಜನ ಗಮನಿಸುತ್ತಿಲ್ಲವೆ ಎಂದು ಕಾಂಗ್ರೆಸ್‌ ಸರ್ಕಾರಕ್ಕೂ ಬಿಸಿ ಮುಟ್ಟಿಸಿದೆ.

ಮುಖ್ಯಮಂತ್ರಿ @BSYBJP ಅವರೇ, ಅತ್ಯಾಚಾರ ಆರೋಪಿಯದ್ದು ತಪ್ಪಿಲ್ಲ, ಷಡ್ಯಂತ್ರ ನಡೆಸಲಾಗಿದೆ ಎಂದು ಹೇಳಿದ್ದೀರಿ, ನಿಮಗೆ ಹೇಗೆ ಅದು ಷಡ್ಯಂತ್ರ ಎನಿಸಿತು, ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು ಎನ್ನುವುದನ್ನ ತಾವೂ SIT ಮುಂದೆ ಹಾಜರಾಗಿ ತಿಳಿಸಿಬಿಡಿ ಸ್ವಾಮಿ! ಎಂದು ಕೇಳಿದೆ.

ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಈ ಸರ್ಕಾರಕ್ಕೆ ಸಲ್ಲಬೇಕು. ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ಕಾಲೆಳೆದಿದೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...