Please assign a menu to the primary menu location under menu

ನಮ್ಮರಾಜ್ಯರಾಜಕೀಯ

14ನೇ ದಿನವೂ ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ ನೌಕರರ ಮೇಲೆ ಲಾಠಿ ಬೀಸಿದ ಖಾಕಿ

ರಾಜ್ಯದ ವಿವಿಧೆಡೆ ಉಪವಾಸ ಸತ್ಯಾಗ್ರಹ ನಿರತ ನೌಕರರ ಬಂಧನ

637Views
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 14ನೇ ದಿನವೂ ಮುಂದುವರಿದಿದ್ದು, ಇಂದು ಕೋಲಾರದಲ್ಲಿ ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ನೌಕರರ ಮೇಲೆ ಪೊಲೀಸರು ಲಾಠಿ  ಬೀಸುವ ಮೂಲಕ  ಸತ್ಯಾಗ್ರಹ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ.

ಇದರಿಂದ ಕುಪಿತಗೊಂಡ ನೌಕರರ ಮುಖಂಡರು ಪೊಲೀಸರ ನಡೆಯನ್ನು ಖಂಡಿಸಿದ್ದು, ಏಕಾಏಕಿ ಲಾಠಿಚಾರ್ಜ್‌ ಮಾಡಲು ನಿಮಗೆ ಏನು ಹಕ್ಕಿದೆ. ನಾವೇನು ತಪ್ಪು ಮಾಡಿದ್ದೇವೆ ಎಂದು ನೀವು ಈ ರೀತಿ ನಡೆದುಕೊಳ್ಳುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಕೋಲಾರ ಡಿಪೋನಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಫೋಟೋಗಳನ್ನಿಟ್ಟುಕೊಂಡು ಶಾಂತಿಯುತವಾಗಿ ಕೊರೊನಾ ನಿಯಮಗಳನ್ನು ಪಾಲಿಸುವ ಮೂಲಕ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಸತ್ಯಾಗ್ರಹ ನಿರತ ನೌಕರರ ಮುಖಂಡರನ್ನು ವಶಕ್ಕೆ ಪಡೆದರು. ಈ ವೇಳೆ ನೌಕರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ನೌಕರರ ಮೇಲೆ ಲಾಠಿ ಚಾರ್ಜ್‌ ಮಾಡಲಾಗಿದೆ.

ಇದರಿಂದ ಸ್ವಲ್ಪ ವಿಚಲಿತರಾದ ನೌಕರರು ನಂತರ ಧೈರ್ಯದಿಂದ ಸತ್ಯಾಗ್ರಹ ಹತ್ತಿಕ್ಕಲು ಬಿಡುವುದಿಲ್ಲ. ನಮ್ಮ ನೋವು ಸಂಕಟ ನಿಮಗೆ ತಿಳಿಯುತ್ತಿಲ್ಲವೇ ಎಂದು ಪೊಲೀಸರ ಬಳಿ ಹೇಳಿಕೊಂಡರು. ಈ ನಡುವೆ ಉಪವಾಸ ಸತ್ಯಾಗ್ರಹ ನಿರತ ನೌಕರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಇನ್ನು ರಾಜ್ಯದ ಹಲವು ಸಾರಿಗೆ ಡಿಪೋಗಳ ಬಳಿ ಶಾಂತಿಯುತವಾಗಿ ಸತ್ಯಾಗ್ರಹ ನಡೆಸುತ್ತಿದ್ದ ಸಾವಿರಾರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬೆಳವಣಿಗೆಯ ನಡುವೆಯೂ ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಾವಿರಾರು ನೌಕರರು ಕೂಗಿ ಹೇಳುತ್ತಿದ್ದರು.

ಇನ್ನು ನಿನ್ನೆ (ಏ.19)  ರಾಜ್ಯದಲ್ಲಿ ಬಹುತೇಕ ಎಲ್ಲಾ ಸಂಘಟನೆಗಳ ಮುಖಂಡರು ನೌಕರರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ್ದು, ನೌಕರರ ನ್ಯಾಯಯುತ ಬೇಡಿಕೆ ಈಡೇರುವವರಗೂ ಅವರ ಜತೆಗೆ ನಾವಿದ್ದೇವೆ ಎಂಬ ಸಂದೇಶ ಸಾರಿದ್ದಾರೆ.

ಬೆಂಗಳೂರಿನಲ್ಲಿರುವ ಸಾರಿಗೆ ನೌಕರರು ಸೋಮವಾರ ಬೆಳಗ್ಗೆ ಫ್ರೀಡಂ ಪಾರ್ಕ್‌ನಲ್ಲಿ ಕೊರೊನಾ ನಿಯಮ ಪಾಲಿಸುವ ಮೂಲಕ ಉಪವಾಸ ಸತ್ಯಾಗ್ರಹ ನಡೆಸಲು  ಮುಂದಾಗಿದ್ದರು. ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ಉಪವಸ ಸತ್ಯಾಗ್ರಹ ನಡೆಸುವ ಮುನ್ನವೇ  ನೌಕರರು ಮತ್ತು ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ನೀಡಿದ ವಿವಿಧ ಸಂಘಟನೆಗಳ ಮುಖಂಡರನ್ನು ಬಂಧಿಸಿದರು.

ಇನ್ನು  ಏ.18ರಂದು ಕಾರ್ಮಿಕ ಆಯುಕ್ತರಿಗೆ ಮಾರ್ಚ್‌ ತಿಂಗಳ ವೇತನ ನೀಡದಿರುವ ಸಾರಿಗೆ ಇಲಾಖೆ ವಿರುದ್ಧ ಏನು ಕ್ರಮ ಜರುಗಿಸಿದ್ದೀರಿ ಎಂಬ ಬಗ್ಗೆ ಮಾಹಿತಿ ಪಡೆದು ಮತ್ತೊಮ್ಮೆ ಮನವಿ ಸಲ್ಲಿಸಲಿದ್ದಾರೆ.

ಈ ನಡುವೆ ಮುಷ್ಕರದ 10ನೇ ದಿನವಾದ ಶುಕ್ರವಾರ ರಾಜ್ಯದ 224 ಶಾಸಕರ ಮನೆ ಮುಂದೆ ಧರಣಿ ನಡೆಸಿ ಮನವಿ ಪತ್ರ ಸಲ್ಲಿಸುವ ಚಳವಳಿ ಬೆಳಗ್ಗೆ 8ಗಂಟೆಯಿಂದಲೇ ಶುರುವಾಗಿ ಮಧ್ಯಾಹ್ನದ ವರೆಗೆ ನಡೆಯಿತು.

ಮುಷ್ಕರದ 6ನೇ ದಿನದಂದು ತಟ್ಟೆ ಲೋಟ ಬಡಿಯುವ ಚಳವಳಿ ಮಾಡಿದ್ದರು. ಈ ವೇಳೆ ಹಲವರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆ ಮಾಡಿದ್ದರು. ಮುಷ್ಕರದ 7ನೇ ದಿನವಾದ ಚಂದ್ರಮಾನ ಯುಗಾದಿಯ ದಿನದಂದು ತಟ್ಟಿ ಹಿಡಿದು ಭಿಕ್ಷೆ ಬೇಡುವ ಚಳವಳಿ ಮಾಡಲಾಯಿತು.

ಮುಷ್ಕರದ 8ನೇ ದಿನದಂದು ಅಂದರೆ ಏ.14ರಂದು ಅಂಬೇಡ್ಕರ್‌ ಪುತ್ಥಳಿ, ಪ್ರತಿಮೆ ಮತ್ತು ಫೋಟೋಗಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ವಿನೂತನ ಚಳವಳಿ ನಡೆಸಿದ್ದು, ಮುಷ್ಕರದ 9ನೇ ದಿನದಂದು ಮೇಣದ ಬತ್ತಿ ಹಚ್ಚುವ ಮೂಲಕ ನಮ್ಮ ಬದುಕನ್ನು ಕತ್ತಲೆಗೆ ದೂಡುತ್ತಿರುವ ಸರ್ಕಾರ ಮತ್ತು ಸಾರಿಗೆ ಸಚಿವರು ಮತ್ತು ಅಧಿಕಾರಿಗಳ ಕಣ್ತೆರೆಸುವ ಚಳವಳಿ ಮಾಡಿದರು.

ಇನ್ನು ನೌಕರರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಈ ನಡುವೆ ಮಂಗಳವಾರ (ಏ.20) ಹೈ ಕೋರ್ಟ್‌ಗೆ ಸಾರ್ವಜನಿಕರ ಹಿತಾಸಕ್ತಿ ಅರ್ಜಿ ( ಪಿಐಎಲ್)‌ ಸಲ್ಲಿಕೆಯಾಗಿದ್ದು ಇಂದು ಕೋರ್ಟ್‌  ಮಧ್ಯಪ್ರವೇಶಿಸುವ ಮೂಲಕ ಏನು ಕ್ರಮ ಜರುಗಿಸುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

 

Editordev
the authorEditordev

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...