NEWSನಮ್ಮರಾಜ್ಯರಾಜಕೀಯ

ವಿವಿಧ ಕಾಮಗಾರಿಗಳಿಗೆ ಸ್ವಕ್ಷೇತ್ರ ಶಿಗ್ಗಾಂವ್ ತಾಲೂಕಿನ ತಡಸದಲ್ಲಿ ಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಶಿಗ್ಗಾಂವ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಸ್ವಕ್ಷೇತ್ರ ಶಿಗ್ಗಾಂವ್ ತಾಲೂಕಿನ ತಡಸ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.

3.3 ಕೋಟಿ ರೂ. ವೆಚ್ಚದ ಕುಮಟಾ-ತಡಸ ಹೆದ್ದಾರಿ ಸುಧಾರಣೆ, 2 ಕೋಟಿ ರೂ. ವೆಚ್ಚದ ಪಡುಬಿದ್ರಿ-ಚಿಕ್ಕಲಗುಡ್ಡ ಹೆದ್ದಾರಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ 2 ಕೋಟಿ ರೂ. ವೆಚ್ಚದ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಿಗ್ಗಾಂವ್‌ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ ನೀಡಲು ಕೇಳಿದ್ದೇವೆ. ಹೀಗಾಗಿ ಅದನ್ನು ನೋಡಿಕೊಂಡು ತೀರ್ಮಾನವನ್ನು ತೆಗೆದುಕೊಳ್ಳಲಾಗುವುದೆಂದು ಹೇಳಿದರು.

ಈಗಾಗಲೇ ನಾವು ವೀಕೆಂಡ್ ಕಫ್ರ್ಯೂ ತೆಗೆದಿದ್ದೇವೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ನೈಟ್ ಕಫ್ರ್ಯೂ ತೆಗೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಆರ್ಥಿಕ ಚಟುವಟಿಕೆ ಮೇಲೆ ನಿಬಂಧ ಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಕೋವಿಡ್ ನಿರ್ವಹಣೆಯೂ, ನಮಗೆ ಅಷ್ಟೇ ಮುಖ್ಯ. ಕೋವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ನೈಟ್ ಕಫ್ರ್ಯೂ ಸಡಿಲಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ದೇಶದ ವಿರುದ್ಧ ಚಟುವಟಿಕೆ ನಡೆಸುವವರ, ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಈಗಾಗಲೇ ಎನ್‍ಐಎ ಕೆಲವರನ್ನು ತೆಗೆದುಕೊಂಡಿದೆ. ಎನ್‍ಐಎ ಜೊತೆ ನಮ್ಮ ಪೊಲೀಸರು ಕೂಡಿಕೊಂಡು ಕೆಲಸ ಮಾಡುತ್ತಿದ್ದಾರೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

ಹುಬ್ಬಳ್ಳಿಗೆ ಬಂದ ಬಳಿಕ ದಾವಣಗೆರೆಗೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದರು.

‌ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್‌, ಬಿ.ಎ.ಬಸವರಾಜ, ಗಣ್ಯರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ