Breaking NewsNEWSನಮ್ಮರಾಜ್ಯ

ಸಾರಿಗೆ ಮುಷ್ಕರ ವಿಚಾರಣೆ: ವಜಾ, ಅಮಾನತು, ವರ್ಗಾವಣೆಗೊಂಡ ನೌಕರರು ಸಲ್ಲಿಸುವ ಮನವಿಗಳ ಮೇಲೆ ಕ್ರಮ ಕೈಗೊಂಡ ವರದಿ ಸಲ್ಲಿಸಿ – ಹೈಕೋರ್ಟ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಮುಷ್ಕರ ಮುಂದುವರಿಸಿ ಬಸ್ ಸೌಲಭ್ಯವಿಲ್ಲದೆ ಜನರು ತೊಂದರೆ ಅನುಭವಿಸುವುದನ್ನು ತಪ್ಪಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ನೌಕರರ ಮುಷ್ಕರ ತಡೆಯಲು ಹಾಗೂ ಮುಷ್ಕರದಿಂದ ಉಂಟಾಗಿರುವ ನಷ್ಟ ವಸೂಲಿ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣ ಸ್ವಯಂ ಸೇವಾ ಸಂಸ್ಥೆ, ವಕೀಲ ನಟರಾಜ ಶರ್ಮಾ ಸೇರಿ ಇತರರು ಸಲ್ಲಿಸಿದ ಪಿಐಎಲ್‌ ಅರ್ಜಿಯನ್ನು ಮಂಗಳವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ಈ ವೇಳೆ ವಾದ ಆಲಿಸಿದ ಪೀಠ ಸದ್ಯ ಕೊರೊನಾದ ಈ ಸಂಕಷ್ಟದಲ್ಲಿ ಉದ್ಭವಿಸಿರುವ ಪರಿಸ್ಥಿತಿಯಿಂದ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ವೇಳೆ ಮುಷ್ಕರ ಮುಂದುವರಿಸಿ ಜನ ಮತ್ತಷ್ಟು ಸಂಕಷ್ಟ ಎದುರಿಸುವ ವಾತಾವರಣ ನಿರ್ಮಾಣವಾಗದಂತೆ ನೋಡಿಕೊಳ್ಳುವುದು ಸರ್ಕಾರ, ಸಾರಿಗೆ ನಿಗಮಗಳು, ನೌಕರರ ಸಂಘಟನೆಯ ಅಂತಿಮ ಉದ್ದೇಶವಾಗಿರಬೇಕು ಎಂದು ಕಿವಿಮಾತು ಹೇಳಿತು.

ಸಾರಿಗೆ ನೌಕರರ ಕೂಟದ ಪರ ವಕೀಲ ಶಿವರಾಜ್‌ ಅವರು ವಾದ ಮಂಡಿಸಿ, ಅಂಗವಿಕಲರು ಹಾಗೂ ಕೋವಿಡ್ ಸೋಂಕಿತರನ್ನು ಸಾರಿಗೆ ನಿಗಮಗಳು ದೂರದ ಘಟಕಗಳಿಗೆ ವರ್ಗಾವಣೆ ಮಾಡಿವೆ ಎಂದು ದೂರಿದರು. ಅದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಈಗಾಗಲೇ ನೌಕರರು ಮುಷ್ಕರ ಹಿಂಪಡೆದಿದ್ದಾರೆ. ನೌಕರರ ವಿರುದ್ಧ ಹೊರಡಿಸಲಾಗಿರುವ ಅಮಾನತು ಮತ್ತು ವರ್ಗಾವಣೆ ಆದೇಶಗಳನ್ನು ಕಾನೂನಾತ್ಮಕವಾಗಿ ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸರ್ಕಾರ ಹಾಗೂ ಸಾರಿಗೆ ನಿಗಮಗಳು ತಿಳಿಸಿವೆ.

ಹೀಗಾಗಿ ಸಾರಿಗೆ ನೌಕರರ ಕೂಟ ಅಮಾನತು, ವಜಾ, ವರ್ಗಾವಣೆಗೊಂಡಿರುವ ಎಲ್ಲಾ ನೌಕರರ ಸಂಪೂರ್ಣ ವಿವರ ಒಳಗೊಂಡಂತೆ ಸಾಮಾನ್ಯ ಮನವಿಯೊಂದನ್ನು ಸಿದ್ಧಪಡಿಸಿ ಎಲ್ಲಾ ನಾಲ್ಕು ಸಾರಿಗೆ ನಿಗಮಗಳ ಕಚೇರಿಗೆ ಸಲ್ಲಿಸಬೇಕು. ನಿಗಮಗಳು ಮನವಿಗಳನ್ನು ಸಂಬಂಧಪಟ್ಟ ಮೇಲ್ಮನವಿ ಪ್ರಾಧಿಕಾರಕ್ಕೆ ರವಾನಿಸಬೇಕು. 2 ವಾರಗಳಲ್ಲಿ ಮೇಲ್ಮನವಿ ಪ್ರಾಧಿಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ನಿರ್ದೇಶಿಸಿತು.

ಮಾತುಕತೆ ಮುಂದುವರಿಯಲಿ
ನೌಕರರ ಬೇಡಿಕೆಗಳಿಗೆ ಸಂಬಂಧಿಸಿದ ವಿಚಾರ ಕೈಗಾರಿಕಾ ನ್ಯಾಯಾಧಿಕರಣದ ಮುಂದೆ ಇದೆ ಎಂದು ಸರಕಾರ ಹೇಳಿದೆ. ಆದ್ದರಿಂದ ಈ ಹಂತದಲ್ಲಿ ಆ ಕುರಿತು ಕಾನೂನಾತ್ಮಕ ಅಂಶಗಳ ಮೇಲೆ ವಿಚಾರಣೆ ನಡೆಯುವುದಿಲ್ಲ. ಆದರೆ ನೌಕರರೊಂದಿಗೆ ಸರ್ಕಾರ ಮತ್ತು ಸಾರಿಗೆ ನಿಗಮಗಳ ಸಮಾಲೋಚನೆ ಮುಂದುವರಿಯಬಹುದು. ಈ ವೇಳೆ ಮಾತುಕತೆ ನಡೆಸಿದರೆ ಅದರ ವಿವರಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಒದಗಿಸಬೇಕು ಎಂದು ಸೂಚಿಸಿದೆ.

ಇನ್ನು ಒಂದೊಮ್ಮೆ ಸಮಾಲೋಚನೆ ನಡೆಸಲು ಸಾಧ್ಯವಾಗದಿದ್ದರೆ ಮಧ್ಯಸ್ಥಿಕೆ ವಹಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಒಬ್ಬರನ್ನು ನೇಮಕ ಮಾಡುವ ಕುರಿತು ಮುಂದಿನ ವಿಚಾರಣೆ ವೇಳೆ ತೀರ್ಮಾನಿಸಲಾಗುವುದು ಎಂದು ನ್ಯಾಯಪೀಠ ಹೇಳಿತು.

ವಜಾ, ಅಮಾನತು, ವರ್ಗಾವಣೆ ಆದೇಶಗಳಿಗೆ ಸಂಬಂಧಿಸಿದಂತೆ ನೌಕರರು ಸಲ್ಲಿಸುವ ಮನವಿಗಳ ಮೇಲೆ ಕ್ರಮ ಕೈಗೊಂಡಿದ್ದರೆ ಆ ಕುರಿತ ವರದಿಯನ್ನೂ ಮುಂದಿನ ವಿಚಾರಣೆ ವೇಳೆ ಕೋರ್ಟಿಗೆ ಸಲ್ಲಿಸಬೇಕು ಎಂದು ಸಾರಿಗೆ ನಿಗಮಗಳಿಗೆ ಸೂಚಿಸಿದ ಪೀಠ ವಿಚಾರಣೆಯನ್ನು ಮೇ 12ಕ್ಕೆ ಮುಂದೂಡಿತು.

Leave a Reply

error: Content is protected !!
LATEST
4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ