NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಕುಟುಂಬ, ಸಾರ್ವಜನಿಕರ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿಕ್ಕಮಗಳೂರು: 6ನೇ ವೇತನ ಆಯೋಗ ಶಿಫಾರಸು ನಮಗೂ ಜಾರಿ ಮಾಡಿ ಎಂಬ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಮೂರು ದಿನದಿಂದ ನಡೆಸುತ್ತಿರುವ ಹೋರಾಟಕ್ಕೆ ಚಿಕ್ಕಮಗಳೂರಿನ ಸಾರಿಗೆ ನೌಕರರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ನೌಕರರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಗಮನಿಸಿ ನಮ್ಮನ್ನು ಬೆಂಬಲಿಸಿದ್ದಕ್ಕೆ ತುಂಬು ಹೃದಯದ ಧನ್ಯವಾದಗಳು ಇದೇ ರೀತಿ ಸಾರ್ವಜನಿಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ನೌಕರರು ಕೇಳಿಕೊಂಡಿದ್ದಾರೆ.

ಈ ವೇಳೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಸಾರಿಗೆ ನೌಕರರ ಸಭೆಯನ್ನು ನಗರ ಹೋಟೆಲ್‌ ಒಂದರಲ್ಲಿ ಕರೆಯಲಾಗಿತ್ತು. ಅದಕ್ಕಾಗಿ ಖಾಸಗಿ ಹೋಟೆಲ್‌ ಹೋಗಿ ಅವರಿದ್ದ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಕೋಡಿಹಳ್ಳಿ ಚಂದ್ರಶೇಖರ್‌ ಅವರ ಬಂಧನವನ್ನು ಖಂಡಿಸಿರುವ ನೌಕರರ ಕುಟುಂಬದವರು ಇದೇನು ಸರ್ಕಾರ ಪ್ರಜಾಪ್ರಭುತ್ವದಡಿ ಆಡಳಿತ ನಡೆಸುತ್ತಿದೆಯೋ ಅಥವಾ ಹಿಟ್ಲರ್‌ ಸರ್ಕಾರ ಇದೆಯೋ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಇಂಥ ಗೊಡ್ಡು ಬೆದರಿಕೆಗಳಿಗೆಲ್ಲ ನಾವು ಜಗ್ಗುವುದಿಲ್ಲ ಎಂಬ ಎಚ್ಚರಿಕೆಯನ್ನು ಸಿಎಂ ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಸವದಿ ಅವರಿಗೂ ನೀಡಿದ್ದಾರೆ.

ನಾವು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ನೀವು ಉಪಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದೀರಿ ಇದು ನಿಮಗೆ ಸರಿ ಎನಿಸುತ್ತಿದೆಯೇ, ಮೊದಲು ನಿಮ್ಮ ಇಲಾಖೆಯಲ್ಲಿ ಇರುವ ಸಮಸ್ಯೆ ಸರಿದೂಗಿಸಿ ಅಮೇಲೆ ಪ್ರಚಾರಕ್ಕೆ ಹೋಗಿ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ