NEWSನಮ್ಮರಾಜ್ಯರಾಜಕೀಯ

ಅಂಗಳ ಅಳೆಯಲು ಅಸಾಧ್ಯರಾದವರಿಗೆ ಆಕಾಶ ಅಳೆಯುವ ತೆವಲು: ಸಿದ್ದುಗೆ ಬಿಜೆಪಿ ಗುದ್ದು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರದ ಅಸಮರ್ಥತೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಕನಸಿನಲ್ಲಿ ಹೊಟ್ಟೆ ತುಂಬ ತಿಂದು ಎಚ್ಚರವಾದ ಮೇಲೆ ತೇಗುವ ವಿಚಿತ್ರ ಹವ್ಯಾಸ ಬೆಳೆಸಿಕೊಂಡಿದ್ದಾರೆ
ಎಂದು ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷದ ಲಸಿಕೆ ನಿಧಿ ಸಂಗ್ರಹ ನಾಟಕವೂ ಹಾಗೆಯೇ ಆಗಿದೆ. ಇಲ್ಲದೇ ಇರುವ ದುಡ್ಡನ್ನು ಕೊಡುತ್ತೇವೆ ಎಂದು ಬಡಾಯಿ ಕೊಚ್ಚಿ ಈಗ ಸರ್ಕಾರದ ಬಳಿ ಅನುದಾನ
ಬೇಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಕಣ್ಣೀರು ಹಾಕಿದರೆ ಆಕ್ಸಿಜನ್, ಲಸಿಕೆ ಸಿಗುವುದಿಲ್ಲ ಎಂದು ದೇಶದ ಪ್ರಧಾನಿ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಅವರಿಗೆ ತಾವು ಗಾಜಿನ‌ಮನೆಯಲ್ಲಿ ಕುಳಿತಿರುವುದು ಮರೆತು ಹೋಗಿದೆ, ಕೋವಿಡ್ ಸೋಂಕಿಗೆ ಹೆದರಿ ಮನೆಬಾಗಿಲು ಮುಚ್ಚಿಕೊಂಡು ಟ್ವೀಟರ್‌ನಲ್ಲಿ ಪ್ರವಚನ ನೀಡುವವರಿಗೆ ಭಾವನೆಗಳ ಬೆಲೆ ಗೊತ್ತಿರಲು ಸಾಧ್ಯವಿಲ್ಲ ಎಂದು ಕಾಲೆಳೆದಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರದ ಅಸಮರ್ಥತೆಯ ಬಗ್ಗೆ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಂಗಳ ಅಳೆಯಲು ಅಸಾಧ್ಯರಾದವರಿಗೆ ಆಕಾಶ ಅಳೆಯುವ ತೆವಲು. ಕಾಂಗ್ರೆಸ್ ಸಲ್ಲಿಸಿದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದ ಮೇಲೂ ಸಿದ್ದರಾಮಯ್ಯ ಅವರಿಗೆ ಬುದ್ಧಿ ಬಂದಿಲ್ಲ ಎಂದು ಲೇವಡಿ ಮಾಡಿದೆ.

ಲಸಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂಬುದು ಸಿದ್ದರಾಮಯ್ಯ ಅವರ ಬೂಟಾಟಿಕೆಯ ಪರಮಾವಧಿಯಲ್ಲದೆ ಮತ್ತೇನಲ್ಲ. ಮಾರಣಾಂತಿಕ ಕಾಯಿಲೆಗೆ ಔಷಧ ಇಲ್ಲ ಎಂದರೆ ಅದು ಕೊಲೆಗೆ ಸಮಾನ ಎಂದು ಸೆಕ್ಷನ್ ಸ್ಪೆಷಲಿಸ್ಟ್ ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ ಎಂದು ವ್ಯಂಗ್ಯವಾಡಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...