NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯನ ನಾನು ಭೇಟಿಯಾಗಿಲ್ಲ- ಮಾಜಿ ಸಿಎಂ ಬಿಎಸ್‌ವೈ : ಹಾಕಿದ ಸವಾಲೇನು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇತ್ತೀಚೆಗೆ ಭೇಟಿಯಾಗಿದ್ದರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿಕೆ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿ ಇಂದು ಸ್ಪಷ್ಟನೆ ನೀಡಿರುವ ಯಡಿಯೂರಪ್ಪ ಅವರು, ಫೆಬ್ರ ವರಿ 27, 2020ರಂದು ನಡೆದ ನನ್ನ ಜನ್ಮ ದಿನದ ಕಾರ್ಯಕ್ರಮ ಹೊರತುಪಡಿಸಿ, ವಿಪಕ್ಷದ ನಾಯಕ ಸಿದ್ದರಾಮಯ್ಯ ನವರನ್ನು ನಾನು ವೈಯಕ್ತಿಕವಾಗಿ ಭೇಟಿಮಾಡಿಲ್ಲ ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಪಕ್ಷದಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದಿದ್ದಾರೆ.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಗುರಿ ತಲುಪುವ ತನಕ ನಾನು ವಿಶ್ರಮಿಸುವುದಿಲ್ಲ. ನಂಬಿದ ಸಿದ್ಧಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗಿಲ್ಲ, ಆಗುವುದೂ ಇಲ್ಲ. ಹಾಗೆಯೇಸಿದ್ದ ರಾಮಯ್ಯ ನವರು ಕೂಡ ಭೇಟಿಯಾಗಿಲ್ಲವೆಂದು ಸ್ಪಷ್ಟ ಪಡಿಸಿರುವುದರಿಂದ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಅರ್ಥರಹಿತವಾಗಿದೆ ಎಂದು ಸ್ಪಷ್ಟ ಪಡಿಸುತ್ತಿದ್ದೇನೆ ಎಂದಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಸುದ್ದಿ ಗಾರರಜೊತೆ ಮಾತನಾಡಿದ್ದ ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಲು ಯಡಿಯೂರಪ್ಪ – ಸಿದ್ದರಾಮಯ್ಯ ಭೇಟಿಯೇ ಕಾರಣ ಎಂದು ಹೇಳಿದ್ದರು.

ಸಿದ್ದರಾಮಯ್ಯ ಅಧಿಕಾರಕ್ಕಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವಿಷಯ ಕೇಂದ್ರಕ್ಕೆ ತಿಳಿದು  ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಈ ದಾಳಿ ನಡೆಸಲಾಗಿದೆ. ದಾಳಿಯ ಹಿಂದೆ ರಾಜಕೀಯದ ಉದ್ದೇ ಶ ಇರುವುದು ಸ್ಪಷ್ಟ ಎಂದು ಹೇಳಿದ್ದರು.

ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿ ಸಿರುವುದಲ್ಲದೇ ಆರೋಪ, ಪ್ರತ್ಯಾ ರೋಪಗಳಿಗೂ ಕಾರಣವಾಗಿದೆ. ಇನ್ನು ಇದೇ ವಿಚಾರವಾಗಿ ಕಲಬುರುಗಿಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು,  ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನಾನು ಭೇಟಿಯಾಗಿದ್ದನ್ನು ಎಚ್.ಡಿ.ಕುಮಾರಸ್ವಾಮಿ ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಯಡಿಯೂರಪ್ಪ ಅವರ 76ನೇ ಜನ್ಮ ದಿನದಂದುಮಾತ್ರ ನಾನು ಖುದ್ದಾ ಗಿ ಭೇಟಿಮಾಡಿದ್ದೇ ನೆ. ನಂತರ ಸದನದಲ್ಲಿ ಮುಖಾಮುಖಿಯಾಗಿದ್ದೇವೆ. ಇದನ್ನು ಹೊರತು ಪಡಿಸಿ ವೈಯಕ್ತಿಕವಾಗಿ ನಾನು ಯಡಿಯೂರಪ್ಪ ನವರನ್ನು ಭೇಟಿಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...