Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಇಂದಿನಿಂದ ರಾಜ್ಯದಲ್ಲಿ ಮತ್ತೆ ಸಾರಿಗೆ ಸಂಚಾರ ಆರಂಭ: ಆರ್ಥಿಕ ಪುನಶ್ಚೇತನಕ್ಕೆ ಸಿಗಲಿದೆ ಟಾನಿಕ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿರುವುದರಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಕರ್ನಾಟಕದಲ್ಲಿ ಜಾರಿಯಲಿದ್ದ ಲಾಕ್​ಡೌನ್, ಜೂನ್ 14ರವರೆಗೂ ಮುಂದುವರಿಯಲಿದೆ. ಆದರೆ, ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್​ಲಾಕ್ ಪ್ರಕ್ರಿಯೆ ಶುರುವಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಒಂದೇ ಸಮಯದಲ್ಲಿ ಎಲ್ಲ ಲಾಕ್​ಡೌನ್ ನಿಯಮಗಳನ್ನೂ ಸಡಿಲಗೊಳಿಸಿದರೆ ಮತ್ತೆ ಕೊರೊನಾ ಕೇಸುಗಳು ತಾರಕಕ್ಕೇರುವ ಅಪಾಯ ಇರುವುದರಿಂದ ಹಂತ ಹಂತವಾಗಿ ಅನ್​ಲಾಕ್ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೋಮವಾರ (ಜೂ.7 )ದಿಂದ ಸಬ್​ ರಿಜಿಸ್ಟ್ರಾರ್​ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಇದೇ ರೀತಿ ಹಂತ ಹಂತವಾಗಿ ಅನ್​ಲಾಕ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ. ಕೊರೊನಾ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಅನ್​ಲಾಕ್​ ಪ್ರಕ್ರಿಯೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಇಂದಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇಂದಿನಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಆರಂಭಿಸಲಾಗಿದ್ದುಕೈಗಾರಿಕೆಗಳಿಗೆ ಲಾಕ್​ಡೌನ್ ನಿಯಮದಿಂದ ವಿನಾಯಿತಿ ನೀಡಲಾಗಿದೆ ಈ ಮೂಲಕ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಚುರುಕು ಪಡೆದಿವೆ. ಜತೆಗೆ ಕೋವಿಡ್ ನಿಯಮಾನುಸಾರ ಕಾರ್ಯ ಚಟುವಟಿಕೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ.

ಕೈಗಾರಿಕೆಗಳಿಗೆ ವಿನಾಯಿತಿ ನೀಡಿರುವುದರಿಂದ ದೂರದೂರುಗಳಿಂದ ಕಾರ್ಮಿಕರು ಬೆಂಗಳೂರಿಗೆ ಬರುತ್ತಿದ್ದಾರೆ. ಕ್ಯಾಬ್, ಆಟೋ, ಬೈಕ್ ಸೇರಿದಂತೆ ಸ್ವಂತ‌ ವಾಹನಗಳಲ್ಲಿ ನಗರಕ್ಕೆ ಆಗಮಿಸಿದ್ದಾರೆ. ಇದರಿಂದ ಇಂದು ಬೆಳಗ್ಗೆ ನೆಲಮಂಗಲ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ತುಮಕೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಜನರು ಬೆಂಗಳೂರಿಗೆ ಬರತೊಡಗಿರುವುದರಿಂದ ತುಮಕೂರು ಬೆಂಗಳೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.

ಶಿವಮೊಗ್ಗ, ಮೈಸೂರು, ವಿಜಯಪುರ ಸೇರಿ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಕಠಿಣ ಲಾಕ್​ಡೌನ್ ನಿಯಮಗಳನ್ನು ಕೊಂಚ ಸಡಿಲಗೊಳಿಸಲಾಗಿದೆ. ಜೂನ್ 14ರವರೆಗೆ ಸಂಜೆಯವರೆಗೂ ಹೋಟೆಲ್, ರೆಸ್ಟೋರೆಂಟ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಪಾರ್ಸಲ್​ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಾರ್​ಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್​ಗಳು, ಧಾರ್ಮಿಕ ಕೇಂದ್ರಗಳು, ಶಾಲಾ-ಕಾಲೇಜುಗಳು, ಜಾತ್ರೆಗಳು, ಸಾರ್ವಜನಿಕ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ.

ಕರ್ನಾಟಕದಲ್ಲಿ ನಿನ್ನೆ ಮತ್ತೆ ಕೊರೊನಾ ಕೇಸ್‌, ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಪಾಸಿಟಿವಿಟಿ ರೇಟ್ ಶೇ. 7.71 ದಾಖಲಾಗಿದೆ. ಕರ್ನಾಟಕದಲ್ಲಿ ನಿನ್ನೆ 12,209 ಕೊರೊನಾ ಕೇಸ್ ಪತ್ತೆಯಾಗಿವೆ. ಭಾನುವಾರ ಒಂದೇ ದಿನ 320 ಜನ ಕೊರೋನಾಗೆ ಬಲಿಯಾಗಿದ್ದಾರೆ. 25,659 ಮಂದಿ ನಿನ್ನೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ 2,944 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 187 ಮಂದಿ ಸಾವನ್ನಪ್ಪಿದ್ದು, 10,224 ಜನರು ಡಿಸ್ಚಾರ್ಜ್ ಆಗಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ