NEWSನಮ್ಮರಾಜ್ಯರಾಜಕೀಯ

ರಸಗೊಬ್ಬರದ ಬೆಲೆ ಏರಿಸಿ ರೈತರ ಕಿತ್ತುತಿನ್ನುತ್ತಿದೆ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿ‌ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಅವರು, ರೈತ ಶತೃ ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2,400 ರೂಪಾಯಿಗಳಿದ್ದ ಬೆಲೆ ಈಗ 3,800 ರೂ ಗಳಾಗುತ್ತಿದೆ. ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600 ರಷ್ಟಾಗಿದ್ದು, ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಬಿಜೆಪಿ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !