NEWSನಮ್ಮರಾಜ್ಯರಾಜಕೀಯ

ನಾನೇನು ಸಾಲ ಮಾಡಿ ತುಪ್ಪ ತಿಂದಿಲ್ಲ: ವಿಪಕ್ಷಗಳಿಗೆ ಸಿಎಂ ಬಿಎಸ್‌ವೈ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಾನೇನು ಸಾಲ ಮಾಡಿ ತುಪ್ಪ ತಿಂದಿಲ್ಲ ಅಥವಾ ಮೋಜಿಗಾಗಿ ಔತಣ ನಡೆಸಲು ಸಾಲದ ಹಣ ಬಳಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ

ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಆರಂಭವಾದ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಸಮೃದ್ಧಿಯ ಸಂದರ್ಭಗಳಲ್ಲೇ ಸರ್ಕಾರಗಳು ಸಾಲ ಮಾಡಿರುವಾಗ ಸಾಂಕ್ರಾಮಿಕ ಸಂಕಷ್ಟ, ಇತಿಹಾಸ ಕಂಡರಿಯದ ಮಳೆ ಮತ್ತು ಪ್ರವಾಹದಿಂದ ಉಂಟಾದ ಪರಿಸ್ಥಿತಿಯಲ್ಲಿ ಸಾಲ ಮಾಡದೆ ಅಭಿವೃದ್ಧಿ ಮಾಡುವುದು ಹೇಗೆ ಸಾಧ್ಯ? ಆರ್ಥಿಕ ಚೈತನ್ಯ ನೀಡಲು ಹೇಗೆ ಸಾಧ್ಯ ಎಂದು ವಿಪಕ್ಷ ನಾಯಕರನ್ನು ಕುಟುಕಿದರು.

ಈವರೆಗೆ ಯಾವುದೇ ಸರ್ಕಾರಗಳು ಯೋಜನೆಗಳ ಅನುಷ್ಠಾನ ಮಾಡಿದ ಉದಾಹರಣೆಗಳಿಲ್ಲ. ಕೊರೊನಾ ಸಾಂಕ್ರಾಮಿಕ ವಿಶ್ವವ್ಯಾಪಿಯಾಗಿ ಬಂದೆರಗಿದಾಗ, ಪರಿಹಾರ ನೀಡಲು ಸರಕಾರ ಬಳಿ ಯಾವುದೇ ಮಂತ್ರದಂಡ ಇರುವುದಿಲ್ಲ ಅಥವಾ ಸರಕಾರದ ಬೊಕ್ಕಸ ಅಕ್ಷಯಪಾತ್ರ ಏನು ಅಲ್ಲ. ಇದು ಪ್ರತಿಪಕ್ಷ ಮತ್ತು ಆಡಳಿತ ಪಕ್ಷದವರಿಗೆ ಗೊತ್ತಿರದ ಸಂಗತಿಯೇನಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ಹಿಂದಿನ ತಿಂಗಳುಗಳಲ್ಲಿ ವಿತ್ತೀಯ ಶಿಸ್ತು ಕಾಪಾಡಿಕೊಂಡಿದ್ದರ ಫಲ ಕಳೆದ ತ್ರೈಮಾಸಿಕದಲ್ಲಿ ಆರ್ಥಿಕ ಚಟುವಟಿಕೆಗಳು ಸುಧಾರಿಸಿವೆ. ಆದರೂ ಒಂದು ತಿಂಗಳ ಕಾಲ ದೇಶದ ಆರ್ಥಿಕತೆ ಕೇವಲ ಮೂರು ತಿಂಗಳಲ್ಲಿ ಪರಿಪೂರ್ಣವಾಗಿ ಚೇತರಿಸಿಕೊಳ್ಳುವುದು ಸುಲಭಸಾಧ್ಯವಲ್ಲ. ಅದು ಸಾಧ್ಯವಾಗಿದೆ. ನನಗೆ ಭರವಸೆ ಆಶಾಕಿರಣವನ್ನು ಮೂಡಿಸಿದೆ ಮುಂದುವರಿಯಲು ಪ್ರಯತ್ನ ಮಾಡಲಿದ್ದೇವೆ ಎಂದು ಹೇಳಿದರು.

ವಿಪಕ್ಷಗಳ ವಿರೋಧ ಭಾಸ
ಒಂದು ಕಡೆ ಬಂದತಾ ವೆಚ್ಚ ಕಡಿಮೆ ಮಾಡಬೇಕು ಎಂದು ವಿಪಕ್ಷಗಳು ಹೇಳುತ್ತವೆ. ಇನ್ನೊಂದು ಕಡೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಹೇಳುತ್ತಾರೆ. ಇದು ಹೇಗೆ ಸಾಧ್ಯ? ರಾಜ್ಯದಲ್ಲಿ ಒಟ್ಟು ಇರುವ ಹುದ್ದೆಗಳ ಸಂಖ್ಯೆ 7,68,027 ಇದರಲ್ಲಿ 5,16,001 ನೇರ ನೇಮಕಾತಿ ಮೂಲಕ ಭರ್ತಿಯಾಗಿರುವ ಹುದ್ದೆಗಳು. ಡೇಟಾ ಎಂಟ್ರಿ ಆಪರೇಟರುಗಳನ್ನು ಸರ್ಕಾರದ ನೀತಿಯ ಪ್ರಕಾರ ಹೊರಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ. ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದರೆ ಸರ್ಕಾರಕ್ಕೆ 12 ಸಾವಿರ ಕೋಟಿ ವೆಚ್ಚವಾಗುತ್ತದೆ ಎಂದರು.

ಶುಲ್ಕ ಪರಿಷ್ಕರಣೆ ಮೂಲಕ ಆದಾಯ ಹೆಚ್ಚಳ
ವಿವಿಧ ಇಲಾಖೆಗಳಲ್ಲಿ ನೀಡುತ್ತಿರುವ ಸೇವೆಗಳಿಗೆ ವಿಧಿಸುತ್ತಿರುವ ಶುಲ್ಕಗಳನ್ನು ಪರಿಷ್ಕರಿಸುವ ಮೂಲಕ ಸರಕಾರ ತೆರಿಗೆಯೇತರ ಆದಾಯವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ನೀಡಿರುವ ಸಾಲ ವಸೂಲಿಗೆ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ ಬೆಂಗಳೂರು ಮತ್ತು ಇತರ ಮಹಾನಗರಗಳ ಪಾಲಿಕೆಗಳಲ್ಲಿ ಇರುವ ಸರ್ಕಾರಿ ಜಮೀನನ್ನು ವಾಣಿಜ್ಯ ಉಪಯೋಗಕ್ಕಾಗಿ ಅಭಿವೃದ್ಧಿಪಡಿಸಲು ಪರಿಶೀಲಿಸಲಾಗುವುದು ಇದರಿಂದ ಆದಾಯ ಹೆಚ್ಚಿಸಬಹುದು ಎಂದರು.

ಕರ್ನಾಟಕ ಮಾತ್ರವಲ್ಲ ನೆರೆಯ ತಮಿಳುನಾಡು ಕೇರಳ ಮಹಾರಾಷ್ಟ್ರ ತೆಲಂಗಣ ರಾಜ್ಯಗಳಲ್ಲೂ ಕೊರತೆ ಬಜೆಟ್ ಮಂಡಿಸಲಾಗಿದೆ. ಈ ರಾಜ್ಯಗಳು ರಾಜ್ಯೋತ್ಸವ ಕೊರತೆ ಎದುರಿಸುತ್ತಿವೆ ಎಂದು ಯಡಿಯೂರಪ್ಪ ಹೇಳಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...