CrimeNEWSನಮ್ಮರಾಜ್ಯ

ಎಸ್‌ಐಟಿ ಅಧಿಕಾರಿಗಳಿಂದ ಸಂತ್ರಸ್ತ ಯುವತಿ ಇದ್ದ R T ನಗರ ಪಿಜಿ ಸ್ಥಳ ಪರಿಶೀಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇದ್ದ ಆರ್‌.ಟಿ.ನಗರದ ಪಿಜಿಯಲ್ಲಿ ಸ್ಥಳ ಮಹಜರು ಮಾಡಲಾಗುತ್ತಿದೆ.

ಇಂದು ಬೆಳಗ್ಗೆ 10ಗಂಟೆಗೆ ಪಿಜಿಗೆ ಯುವತಿಯೊಂದಿಗೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ಪೊಲೀಸ್‌ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರ್‌ ಮಾಡುತ್ತಿದ್ದು, ಇದೇ ವೇಳೆ ಯುವತಿಗೆ ಕೆಲ ಪ್ರಶ್ನೆಗಳನು ಕೇಳುತ್ತಿದ್ದಾರೆ.

ಅದರಲ್ಲಿ ಕೆಲವು ಮುಖ್ಯವಾಗಿ ನಿಮ್ಮೊಂದಿಗೆ ಪಿಜಿಯಲ್ಲಿ ಯಾರು ಇದ್ದರು. ನೀವು ಒಬ್ಬರೆ ಇದಿದ್ದಾ? ಇಲ್ಲಿ ಸುಮಾರು 9-10 ಲಕ್ಷ ರೂ. ಸಿಕ್ಕಿದ್ದು ಈ ಬಗ್ಗೆ ಏನು ಹೇಳುತ್ತೀರಾ? ಇನ್ನು ಇಲ್ಲಿಗೆ ಯಾರೆಲ್ಲ ನಿಮ್ಮನ್ನು ಭೇಟಿಯಾಗಲು ಬರುತ್ತಿದ್ದರು ಎಂಬುವುದು ಸೇರಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

ಇನ್ನು ಯುವತಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಆರ್‌.ಟಿ.ನಗರ ಪಿಜಿಯಲ್ಲಿ ಸ್ದಳ ಮಹಜರ್‌ ಮುಗಿದ ಬಳಿಕ ಮಲ್ಲೇಶ್ವರಂನಲ್ಲಿರುವ ಮಂತ್ರಿ ಅಪಾರ್ಟ್‌ಮೆಂಟ್‌ನಲ್ಲೂ ಸ್ಥಳ ಮಹಜರ್‌ ಮಾಡಲಾಗುವುದು. ಈ  ಅಪಾರ್ಟ್‌ಮೆಂಟ್‌ನಲ್ಲಿ ಮಾಜಿ ಮಂತ್ರಿ ಇದ್ದರು. ಈ ವೇಳೆ 3-4 ಬಾರಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿ  ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಈ ಸ್ಥಳ ಪರಿಶೀಲನೆಗೆ ಅಧಿಕಾರಿಗಳು ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟಾರೆ ಇಂದು ಯುವತಿಯ ಎಲ್ಲ ಹೇಳಿಕೆಗಳನ್ನು ದಾಖಲಿಸುವ ಹಂತವನ್ನು ಎಸ್‌ಐಟಿ ಅಧಿಕಾರಿಗಳು ತಲುಪಿದ್ದು, ಬಹುತೇಕ ಮೂರು ಕಡೆಗಳನ್ನೂ ಸ್ಥಳ ಮಹಜರ್‌ ಮಗುಯಲಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ