NEWSಕೃಷಿನಮ್ಮಜಿಲ್ಲೆ

ತೋಟಗಾರಿಕಾ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ ರಾಜ್ಯ: ರಾಜ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ದೊಡ್ಡಬಳ್ಳಾಪುರ: ಕರ್ನಾಟಕ ತೋಟಗಾರಿಕಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು ಉತ್ಪಾದನಾ ಕ್ಷೇತ್ರದಲ್ಲಿ ಆಧುನಿಕ ತಾಂತ್ರಿಕತೆ ನಿವಾರಣೆ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕ್ಷೇತ್ರದಲ್ಲಿ ಸುಧಾರಣೆಗಳ ಅಗತ್ಯವಿದೆ ಎಂದು ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಸಂಘದ ಅಧ್ಯಕ್ಷ ರಾಜ್ ಕುಮಾರ್ ಹೇಳಿದರು.

ತಾಲೂಕಿನ ತೂಬಗೆರೆಯ ಸಂಘದ ಆವರಣದಲ್ಲಿ ಇಂದು ನಡೆದ ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯ ಐದನೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ರೈತರು ಬೆಳೆದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೇ ತೆರಿಗೆ ಉಳಿತಾಯ ಮಾಡುವ ನಿಟ್ಟಿನಲ್ಲಿ ಕಂಪನಿ ಆರಂಭವಾಗಿದೆ. ಗುಣಮಟ್ಟದ ಬಿತ್ತನೆ ಬೀಜ ರಸಗೊಬ್ಬರಗಳನ್ನು ಕಡಿಮೆ ಬೆಲೆಯಲ್ಲಿ ರೈತರಿಗೆ ಒದಗಿಸುವುದು ಅಗತ್ಯವಾದ ಟ್ರ್ಯಾಕ್ಟರ್ ಪವರ್ ಟಿಲ್ಲರ್, ಕಳೆ ತೆಗೆಯುವ ಯಂತ್ರ ಇನ್ನು ಮುಂತಾದ ಯಂತ್ರೋಪಕರಣಗಳನ್ನು ಕಡಿಮೆ ಬೆಲೆಯಲ್ಲಿ ರೈತರಿಗೆ ಒದಗಿಸಿ ಕೊಳ್ಳುವಂತೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ತೋಟಗಾರಿಕಾ ಸಹಾಯಕ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಸದಸ್ಯರು ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸದೆ ತಿಂಗಳಿಗೆ ಒಮ್ಮೆಯಾದರೂ ಕಂಪನಿಯ ಕಚೇರಿಯಲ್ಲಿ ಬಂದು ಮಾಹಿತಿ ತಿಳಿದುಕೊಂಡು ಕಂಪನಿಯ ಪ್ರಯೋಜನಗಳನ್ನು ಪಡೆಯಬೇಕು. ರೈತರಿಗೆ ಮಾಹಿತಿ ನೀಡಿದಾಗ ಸಮಸ್ತ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ಹಾಡೋನಹಳ್ಳಿ ಕೆವಿಕೆ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಗೌಡ, ತೋಟಗಾರಿಕಾ ಸಂಘದ ಉಪಾಧ್ಯಕ್ಷೆ ಬಿ.ಕೆ. ಸುಜಾತ. ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಂಗರಾಜು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಲೀಲಾವತಿ ಹಾಗೂ ಸುತ್ತಮುತ್ತಲಿನ ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!