ಬೆಂಗಳೂರು: ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದರು. ಹೀಗಾಗಿ ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಐಟಿ ದಾಳಿ ಬೆನ್ನಲ್ಲೇ ಸುದ್ದಿಗೋಷ್ಠಿ ಇಂದು ನಡೆಸಿದ ಅವರು, ಈಗ ಜಮೀರ್ ಅವರಿಗೆ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ಅನ್ನೋದು ನನಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನುಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು.
ಇನ್ನು ಜಮೀರ್ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರದ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದರು. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ