NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ ಸನ್ಮಿತ್ರ: ಸಿದ್ದರಾಮಯ್ಯ ಹೇಳಿಕೆಗೆ ಎಚ್‌ಡಿಕೆ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ ಎಸ್‌.ಎಂ. ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಿದ್ದರಾಮಯ್ಯ ಅವರ ಹೆಸರು ಹೇಳದೆ ಪ್ರಶ್ನಿಸಿದ್ದಾರೆ.

ಬಿಜೆಪಿಯೊಂದಿಗೆ ಒಡಂಬಡಿಕೆ ಇರುವುದರಿಂದ ಜೆಡಿಎಸ್ ಬಸವಕಲ್ಯಾಣ ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು.

ನಿನ್ನೆ ದಿವಂಗತ ಬಿ.ನಾರಾಯಣ ರಾವ್ ಅವರ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮನವರ ನಾಮಪತ್ರ ಸಲ್ಲಿಕೆಗಾಗಿ ಬಸವಕಲ್ಯಾಣಕ್ಕೆ ತೆರಳುವ ಮೊದಲು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಜೆಡಿಎಸ್‌ ವಿರುದ್ಧ ಈ ಆರೋಪ ಮಾಡಿದ್ದಕ್ಕೆ ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ.

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ?

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ.

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...