NEWSನಮ್ಮರಾಜ್ಯರಾಜಕೀಯ

ದೇವಾಲಯಗಳಿಗೆ ಭೇಟಿ ನೀಡಿದ ಪ್ರವಾಸೋದ್ಯಮ ನಿಗಮದ ನೂತನ ಅಧ್ಯಕ್ಷ ಕಾಪು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ನೂತನ ಅಧ್ಯಕ್ಷ ವರುಣ ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ ಮಂಗಳವಾರ ಹಲವು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ವಿವಿಧ ಮಠಗಳಿಗೆ ತೆರಳಿ ಹರಗುರು ಚರಮೂರ್ತಿಗಳ ಆಶೀರ್ವಾದ ಪಡೆದರು.

ರಾಜ್ಯ ಸರ್ಕಾರ ಕಾ.ಪು.ಸಿದ್ದಲಿಂಗಸ್ವಾಮಿ ಅವರ ಪಕ್ಷ ನಿಷ್ಠೆ ಗುರುತಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ವರಿಷ್ಠರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಠ-ಮಂದಿರಗಳಿಗೆ ಬೆಂಬಲಿಗರು ಹಾಗೂ ಕಾರ್ಯಕರ್ತರ ಭೇಟಿ, ದೇವರು ಮತ್ತು ಮಠಾಧೀಶರ ಆಶೀರ್ವಾದವನ್ನು ಪಡೆದರು.

ನಂತರ ಪಟ್ಟಣದ ಶ್ರೀ ಮಹದೇಶ್ವರ ಭವನದಲ್ಲಿ ಸನ್ಮಾನ ಸ್ವೀಕರಿಸಿದ ಕಾ.ಪು. ಮಾತನಾಡಿ, ಐತಿಹಾಸಿಕ ಹಾಗೂ ಚಾರಿತ್ರಿಕ ಹಿನ್ನೆಲೆಯುಳ್ಳ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಎಲ್ಲರೊಟ್ಟಿಗೆ ದುಡಿಯುತ್ತೇನೆ.

ರಾಜ್ಯ ರಾಜಕಾರಣ ಹಾಗೂ ಪಕ್ಷಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದ ಅಗತ್ಯವಿದೆ. ಪ್ರವಾಸೋದ್ಯಮ ರಂಗದಲ್ಲಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳು ಹಾಗೂ ವರಿಷ್ಠರಿಗೆ ಆಭಾರಿಯಾಗಿದ್ದೇನೆ ಎಂದರು.

ಉದ್ಯಮಿ ಹೋಟೆಲ್ ಲಿಂಗರಾಜು (ರಾಜಣ್ಣ), ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಕಾನ್ಯ ಶಿವಮೂರ್ತಿ, ನಂಜನಗೂಡು ಎಪಿಎಂಸಿ ಮಾಜಿ ಅಧ್ಯಕ್ಷ ಚಿನ್ನಂಬಳ್ಳಿ ಮಂಜುನಾಥ, ಗ್ರಾಪಂ ಸದಸ್ಯ ಸಂತೆಮರಳ್ಳಿ ಮಹೇಶ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಮಾಜಿ ಜಿಲ್ಲಾಧ್ಯಕ್ಷ ವೆಂಕಟರಮಣ ಶೆಟ್ಟಿ, ವರುಣ ಪ್ರಧಾನ ಕಾರ್ಯದರ್ಶಿ ರಂಗು ನಾಯಕ, ಮುಖಂಡರಾದ ಬಿಳಿಗೆರೆ ಮಹೇಶ, ಬಾಗಳಿ ಯೋಗೇಶ, ತಿರುಮಕೂಡಲು ದೀಪು ಇದ್ದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ