Please assign a menu to the primary menu location under menu

NEWSನಮ್ಮರಾಜ್ಯ

ಸತಿ – ಪತಿಗಳ ಕೈಯಲ್ಲಿ ಮಂಡ್ಯ – ಮೈಸೂರು ಜಿಲ್ಲಾಧಿಕಾರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮಂಡ್ಯ- ಮೈಸೂರು ಜಿಲ್ಲೆಗಳ ಅಧಿಕಾರ ಸತಿ-ಪತಿಗಳ ಕೈಗೆ ಸರ್ಕಾರ ಒಪ್ಪಿಸಿದ್ದು ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚನೆ ನೀಡಿದೆ.

ಹೌದು! ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಆರೋಪದಿಂದಾಗಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಆ ಜಾಗಕ್ಕೆ ಐಎಎಸ್‌ ಅಧಿಕಾರಿ ಡಾ. ಬಗಾದಿ ಗೌತಮ್‌ ಅವರನ್ನು ನಿಯೋಜಿಸಲಾಗಿದೆ.

ಈಗ ಮೈಸೂರಿನಲ್ಲಿ ಪತಿ ಹಾಗೂ ಮಂಡ್ಯದಲ್ಲಿ ಸತಿ ಜಿಲ್ಲಾಧಿಕಾರಿಯಾಗಿದ್ದಾರೆ. ಈ ಮೂಲಕ ಒಂದು ರೀತಿ ಜೋಡಿ ಜೊಡಿ ಜಿಲ್ಲೆಗಳ ಆಡಳಿತವನ್ನು ಜೋಡಿಗಳ ಕೈಗೆ ಸರ್ಕಾರ ಒಪ್ಪಿಸಿರುವುದು ಅಭಿವೃದ್ಧಿ ದೃಷ್ಟಿಯಿಂದಲೂ ಒಳೆ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಡಾ.ಬಗಾದಿ ಗೌತಮ್ ಅವರ ಪತ್ನಿ ಅಶ್ವತಿ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದಾರೆ. ಗೌತಮ್ ಆಂಧ್ರಪ್ರದೇಶದವರಾಗಿದ್ದು, ಅಶ್ವತಿ ಕೇರಳದವರಾಗಿದ್ದಾರೆ. ಇವರಿಬ್ಬರೂ ಒಂದೇ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮದುವೆಯಾಗಿದ್ದಾರೆ.

2019ರಲ್ಲಿ ಗೌತಮ್ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದರು. ಈ ವೇಳೆ ಅಶ್ವತಿ ಅವರು ಅದೇ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದರು. ಇಬ್ಬರೂ ಪರಸ್ಪರ ಒಪ್ಪಿ ಮದುವೆಯಾದರು.

Leave a Reply

error: Content is protected !!
LATEST
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ