NEWSನಮ್ಮರಾಜ್ಯಸಿನಿಪಥ

ಕಲಬುರಗಿ: ಪುನೀತ್ ರಾಜ್ ಕುಮಾರ್‌ಗೆ ಅಭಿಮಾನಿಗಳಿಂದ ಪುಷ್ಪ ವೃಷ್ಟಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿ ಸುದ್ದಿ
ಕಲಬುರಗಿ: ಕಲಬುರಗಿಯ ಶರಣ ಬಸವೇಶ್ವರ ದೇವಸ್ಥಾನಕ್ಕೆ ಬಂದ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ಜೆಸಿಬಿ ಮೇಲೆ ನಿಂತು ಪುಷ್ಪ ವೃಷ್ಟಿ ಸುರಿಸುವ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು.

ಪೊಗರು, ರಾಬರ್ಟ್ ನಂತರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ನಟ ಪುನೀತ್ ರಾಜ್ ಕುಮಾರ್ ಕಾಂಬಿನೇಷ್ ನಲ್ಲಿ ಸ್ಯಾಂಡಲ್ ವುಡ್ ನ ಮತ್ತೊಂದು ಬಿಗ್ ಬಜೆಟ್ ಚಿತ್ರ ಯುವರತ್ನ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ರಾಜ್ಯಾದ್ಯಂತ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ.

ಪ್ರಚಾರಕ್ಕಾಗಿ ಭಾನುವಾರ ಬೆಳಗ್ಗೆ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಚಿತ್ರತಂಡಕ್ಕೆ ಅದ್ದೂರಿ ಸ್ವಾಗತ ನೀಡಲಾಯಿತು. ಈ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೋಡಲು ಮುಗಿ ಬಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ತುಸು ಕಷ್ಟವಾಗಿದ್ದರಿಂದ ಪೊಲೀಸರು ಲಾಠಿ ಬೀಸಬೇಕಾಯಿತು.

ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಪುನೀತ್ ರಾಜ್ ಕುಮಾರ್, ತಂದೆ ಡಾ. ರಾಜ್ ಕುಮಾರ್ ಅವರ ಕಾಲದಿಂದಲೂ ಕಲಬುರಗಿ ನಗರದೊಂದಿಗೆ ಒಡನಾಟ ಹೊಂದಿರುವುದಾಗಿ ಹೇಳಿದರು.

ಇನ್ನು ಕಲಬುರಗಿಯಲ್ಲಿ ಶೀಘ್ರದಲ್ಲಿಯೇ ಸಿನಿಮಾ ವೊಂದರ ಶೂಟಿಂಗ್ ಮಾಡಲಿದ್ದೇವೆ. ಯಾವ ಸಿನಿಮಾ ಎಂಬುದನ್ನು ಸ್ವಲ್ಪ ದಿನದಲ್ಲೇ ಬಹಿರಂಗಪಡಿಸಲಾಗುವುದು ಎಂದರು. ಈ ನಡುವೆ ಸಿನಿಮಾ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿರಾಸೆ ಗೊಂಡರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...