Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ರಮೇಶ್ ಜಾರಕಿಹೊಳಿ ವಿರುದ್ಧ ಕೈ ಕಾರ್ಯಕರ್ತರು- ಡಿಕೆಶಿ ವಿರುದ್ಧ ರಮೇಶ್‌ ಬೆಂಬಲಿಗರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು\ ಗೋಕಾಕ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕದಲ್ಲಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಸಲೀಲೆ ಸಿಡಿ ಷಡ್ಯಂತ್ರ ನಡೆಸಿದ್ದಾರೆ ಡಿಕೆಶಿ ಎಂದು ಅವರ ವಿರುದ್ಧ ಆಕ್ಷೇಪರ್ಹ ಪದ ಪ್ರಯೋಗ ಮಾಡಿರುವ ರಮೇಶ್ ಜಾರಕಿಹೊಳಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಸದಾಶಿವನಗರದಲ್ಲಿರುವ ರಮೇಶ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಇಂದು ಮತ್ತೆ ರಮೇಶ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ನಡುವೆ ನಮ್ಮ ನಾಯಕ ರಮೇಶ್‌ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಒಳಸಂಚು ರೂಪಿಸಿದ್ದಾರೆ ಡಿಕೆಶಿ ಎಂದು ಆರೋಪಿಸಿ ಗೋಕಾಕದಲ್ಲಿ ಡಿಕೆಶಿ ಬಂಧಿಸಬೇಕು ಮತ್ತು ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಡಿಕೆಶಿ ವಿರುದ್ಧ ಅಸಭ್ಯ ಪದ ಬಳಕೆ ಮಾಡಿರುವುದಕ್ಕೆ ಇನ್ನು ಮಂಡ್ಯದಲ್ಲೂ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂಸ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ