Please assign a menu to the primary menu location under menu

CrimeNEWSನಮ್ಮರಾಜ್ಯ

ಕಾಗೆ ತಿಂದು ಹಿಂದಾಕಿದರು ಮೂಗು ತೂರಿಸುವ ಸಿದ್ದರಾಮಯ್ಯ ಈಗ್ಯಾಕೆ ಮಾತನಾಡುತ್ತಿಲ್ಲ: ಕಾಲೆಳೆದ ಬಿಜೆಪಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆಯೇ ಆಡಳಿತ ಪಕ್ಷವು ಕಾಂಗ್ರೆಸ್ಸನ್ನು ತರಾಟೆಗೆ ತೆಗೆದುಕೊಂಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆಯಲು ಶುರುಮಾಡಿದೆ.

ಕಾಗೆ ಹಿಕ್ಕೆ ಹಾಕಿದರೂ ಸಿದ್ದರಾಮಯ್ಯನವರು ಮೂಗು ತೂರಿಸುತ್ತಾರೆ. ಆದರೆ ಈ ಸಿಡಿ ಸಂಬಂಧ ಶಿವಕುಮಾರ್ ಅವರ ಪಾತ್ರದ ಬಗ್ಗೆ ಏನು ಮಾತನಾಡದೇ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದೆ. ಈ ರೀತಿ ಷಡ್ಯಂತರದಲ್ಲಿ ಭಾಗವಹಿಸುವುದು ಯಾವ ಸೆಕ್ಷನ್ ಪ್ರಕಾರ ಅಪರಾಧವಾಗುತ್ತದೆ ಎಂದು ಜನರ ಮುಂದೆ ಹೇಳಿ ಸಿದ್ದರಾಮಯ್ಯನವರೇ ಎಂದು ಕಾಲೆಳೆದಿದೆ.

ಸಹಾಯ ಮಾಡುವುದಕ್ಕೂ ಷಡ್ಯಂತರದಲ್ಲಿ ಭಾಗಿಯಾಗುವುದಕ್ಕೂ ವ್ಯತ್ಯಾಸವಿದೆ. ಈ ಷಡ್ಯಂತರದ ಭಾಗವಾದಿದ್ದ ಕಾರಣದಿಂದಲೇ ಹೆಗಲು ನೋಡಿಕೊಂಡಿದಲ್ಲವೆ. ಮಹಾ ನಾಯಕರೇ, ಈ ಪ್ರಕರಣ ಪ್ರಮುಖ ಮಾಸ್ಟರ್‌ ಮೈಂಡ್‌ಗಳೊಂದಿಗೆ ಅದರಲ್ಲೂಈ ಪ್ರಕರಣ ಬೆಳಕಿಗೆ ಬಂದ ನಂತರವೂ ಸಂಬಂಧ ಹೊಂದಲು ಅದು ಹೇಗೆ ಸಾಧ್ಯ ಎಂದು ಬಿಜೆಪಿ ಮತ್ತೊಂದು ಟವೀಟ್‌ನಲ್ಲಿ ಶಿವಕುಮಾರ್ ಅವರನ್ನು ಪ್ರಶ್ನಿಸಿದೆ.

ಶಿವಕುಮಾರ್ ಅವರೇ, ಆರಂಭದಲ್ಲಿ ಹೆಗಲು ಮುಟ್ಟಿಕೊಂಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ತೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಅವರನ್ನು ನಾನು ಬಲ್ಲೆ. ಅವರ ಮನೆಗೆ ಹೋಗಿದ್ದೇನೆ ಎಂದಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ