ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರ ಈ ವರೆಗೆ ಸರಿಯಾಗಿ ಒಂದು ಸಾವಿರ ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಿಲ್ಲ, ಕೇವಲ ತೋರಿಕೆಗಾಗಿ ಕೆಲವರಿಗೆ ಪರಿಹಾರ ನೀಡಿದ್ದಾರೆ. ಎಲ್ಲಾ ಬಿ.ಪಿ.ಎಲ್ ಕಾರ್ಡುದಾರರಿಗೆ ತಲಾ ಹತ್ತು ಕೆ.ಜಿ. ಅಕ್ಕಿ ಮತ್ತು 10,000 ರೂ. ಪರಿಹಾರ ನೀಡಿದ್ದರೆ ನಿಜವಾದ ಪರಿಹಾರವಾಗುತ್ತಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಪ್ರತಿ ಪ್ರಜೆಗೂ ಉಚಿತವಾಗಿ ಕೊರೊನಾ ಲಸಿಕೆಯನ್ನು ಕೇಂದ್ರ ಸರ್ಕಾರವೇ ನೀಡಬೇಕು ಎಂದು ಮೊದಲಿನಿಂದಲೂ ನಾವು ಒತ್ತಾಯ ಮಾಡುತ್ತ ಬಂದಿದ್ದೆವು. ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ ಹೆದರಿ ಪ್ರಧಾನಿ ಮೋದಿ ಅವರು ಉಚಿತ ಲಸಿಕೆ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.