NEWSನಮ್ಮರಾಜ್ಯ

ಜೂನ್‌ 4 ಇಲ್ಲ 5ರಂದು ಲಾಕ್‌ಡೌನ್‌ ತೆರವು ಕುರಿತ ಮಹತ್ವದ ಸಭೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಪಾಸಿಟಿವಿಟಿ ರೇಟ್‌ ಶೇ.5ಕ್ಕೆ ಬಂದರೆ ಅನ್‌ಲಾಕ್‌ ಮಾಡುವಂತೆ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಸಿದ್ದಾರೆ.

ಹೌದು! ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಮತ್ತು ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆ ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಾಧ್ಯ ಆದ ಕಾರಣ ಕನಿಷ್ಠ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೊನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕೊರೊನಾ ಕುರಿತು ಸಲಹೆ ನೀಡಲು ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿಯು ಭಾನುವಾರ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ನೇತೃತ್ವದಲ್ಲಿ ಸುಮಾರು ಐದೂವರೆ ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿತು.

ಬಳಿಕ ಈ ಮಹತ್ವದ ಶಿಫಾರಸು ಒಳಗೊಂಡ ವರದಿಯನ್ನು ಸೋಮವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಹಸ್ತಾಂತರಿಸಿದ್ದು, ವರದಿ ಸಂಬಂಧ ಈಗಾಗಲೇ ಸಚಿವರು ಹಲವು ಸ್ಪಷ್ಟನೆಗಳನ್ನು ಪಡೆದಿದ್ದಾರೆ. ಅಂತಿಮವಾಗಿ ವರದಿಯಲ್ಲಿನ ಅಂಶಗಳ ಬಗ್ಗೆ ಜೂನ್.4 ಅಥವಾ 5 ರಂದು ಸರ್ಕಾರದ ಹಂತದಲ್ಲಿ ಸಭೆ ನಡೆಯಲಿದ್ದು. ಈ ವೇಳೆ ಜೂ.7ರ ಬಳಿಕವೂ ಲಾಕ್ಡೌನ್ ಮುಂದುವರೆಸುವ ಬಗ್ಗೆ ಅಂತಿಮ ನಿರ್ಧಾರ ಮಾಡಲಿದ್ದಾರೆ.

ವರದಿಯಲ್ಲಿ ಲಾಕ್ಡೌನ್ ಹಿಂಪಡೆಯಲು ಕೊರೊನಾ ಪ್ರಕರಣಗಳಿಗೆ ಸಂಬಂಧಿಸಿದ ನಿರ್ದಿಷ್ಟ ಸಂಖ್ಯೆಯ ಗುರಿ ನೀಡಲಾಗಿದೆ. ಈ ಗುರಿ ಸಾಧನೆಗೂ ಮುನ್ನ ಲಾಕ್ಡೌನ್ ಹಿಂಪಡೆದರೆ ಇದೂವರೆಗೆ ಮಾಡಲಾಗಿರುವ ಲಾಕ್ಡೌನ್‌ನಿಂದ ಯಾವುದೇ ಪ್ರಯೋಜನ ಸಿಗುವುದಿಲ್ಲ ಎಂದು ಎಚ್ಚರಿಸಿದೆ.

ವೈಜ್ಞಾನಿಕ ಸಲಹೆ ಆಧರಿಸಿ ನಿರ್ಬಂಧಗಳ ಸಡಿಲಗೊಳಿಸುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ತಾಂತ್ರಿಕ ಸಲಹಾ ಸಮಿತಿ ವರದಿ ಸಲ್ಲಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಜನಪ್ರತಿನಿಧಿಗಳು ಜನರೊಂದಿಗೆ ಬಹಳ ಹತ್ತಿರದಿಂದ ಕೆಲಸ ಮಾಡುತ್ತಿರುವುದರಿಂದ ಅವರಿಗೆ ವಾಸ್ತವ ಸ್ಥಿತಿಗತಿ ಬಗ್ಗೆ ಅರಿವಿದೆ. ಜನರ ಅಭಿಪ್ರಾಯವನ್ನೇ ಸಾಕಷ್ಟು ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಆದರೆ, ವೈಜ್ಞಾನಿಕ ಸಲಹೆ ಆಧಾರದ ಮೇಲೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಕೊರೊನಾ ಮೂರನೇ ಅಲೆಯು 0-9 ವರ್ಷ ವಯಸ್ಸಿನ ಮಕ್ಕಳ ಜನಸಂಖ್ಯೆಯಲ್ಲಿ ಮರಣ ಪ್ರಮಾಣವನ್ನು ಶೇ.4 ರಷ್ಟು ಹೆಚ್ಚಿಸುತ್ತದೆ ಮತ್ತು ಪ್ರಕರಣಗಳಲ್ಲಿ ಶೇ.43 ರಷ್ಟು ಏರಿಕೆಯಾಗುತ್ತದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ. ಅಲ್ಲದೆ, 3ನೇ ಅಲೆಯು 10-19 ವರ್ಷ ವಯಸ್ಸಿನ ಮಕ್ಕಳಲ್ಲಿ ಮರಣದ ಪ್ರಮಾಣವು ಶೇ.6 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಪ್ರಕರಣಗಳ ಸಂಖ್ಯೆಯಲ್ಲಿ 60 ಪ್ರತಿಶತದಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿರುವ ಪ್ರಕಾರ ಮುಂದಿನ ಕೊರೊನಾ ಅಲೆ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ಆರಂಭವಾಗಲಿದೆ. ಅಲ್ಲಿಯವರೆಗೆ ನಮಗೆ ನಾಲ್ಕು ತಿಂಗಳು ಕಾಲಾವಕಾಶವಿದೆ. ಅಷ್ಟರಲ್ಲಿ ಕ್ಲಿನಿಕಲ್ ಸೌಲಭ್ಯ, ತರಬೇತಿ, ಮಾನವ ಸಂಪನ್ಮೂಲಗಳನ್ನು ಹೆಚ್ಚಿಸಬೇಕಿದೆ ಎಂದು ವಿವರಿಸಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ