Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈರಲ್ಲಿ ಏನೋ ಹುಳುಕಿದೆ ಅನಿಸುತ್ತಿದೆ: ಸಿಡಿ ಪ್ರಕರಣದಲ್ಲಿ ಸಿಎಂ ಮೌನಕ್ಕೆ ಕುಟುಕಿದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮೌನವಹಿಸಿರುವುದು ನೋಡಿದರೆ ಅವರಲ್ಲಿ ಏನೋ ಹುಳುಕಿದೆ ಅನ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸಿಡಿ ಪ್ರಕರಣದ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಇಡೀ ಪ್ರಕರಣ ಹಾಗೂ ಸಂತ್ರಸ್ತೆಯ ರಕ್ಷಣೆ ವಿಚಾರವಾಗಿ ಸಿಎಂ ಮಾತನಾಡಬೇಕಿತ್ತು. ಆದರೆ ಏಇದುವರೆಗೂ ಏನು ಪ್ರತಿಕ್ರಿಯೆ ನೀಡಿಲ್ಲ ಎಂದ ಅವರು, ಯುವತಿ ರಕ್ಷಣೆ ಕೊಡಿಸಿ ಎಂದು ವಿಡಿಯೋ ಒಂದರಲ್ಲಿ ಕೋರಿದ್ದಾರೆ. ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೇಳಿದ್ದೇನೆ ಎಂದರು.

ಕೇಂದ್ರದ ಗುಲಾಮರಾಗಿರುವ ಸಂಸದರು
ರಾಜ್ಯದ ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುತ್ತಿದೆ ಎಂಬ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸಂಸದರು ಕೇಂದ್ರದ ಗುಲಾಮರಾಗಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಸಮರ್ಪಕವಾಗಿ ಅನುದಾನ ಸಿಗುತ್ತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿರುವ ಬಿಜೆಪಿ ಸಂಸದರು ಈ ಬಗ್ಗೆ ಧ್ವನಿಯೆತ್ತುತ್ತಿಲ್ಲ. ಯಡಿಯೂರಪ್ಪ ಸರ್ಕಾರವೂ ಕೇಳುತ್ತಿಲ್ಲ ಅವರಿಗೆ ಜನರು ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.

ಕೇಂದ್ರ ಹಾಗೂ ರಾಜ್ಯ ಸರಕಾರದ ದುರಾಡಳಿತ, ಕೊಟ್ಟ ಭರವಸೆಗಳನ್ನು ಈಡೇರಿಸದಿರುವುದು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳದಿರುವುದು ಮೊದಲಾದ ವಿಷಯಗಳನ್ನು ಉಪಚುನಾವಣೆಯಲ್ಲಿ ಪ್ರಸ್ತಾಪಿಸುತ್ತೇವೆ ಎಂದರು.

ಜೋಷಿ ಸೈಡ್ ಆಕ್ಟರ್
ಸಿಡಿ ಪ್ರಕರಣದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾಗಿ ಜನಮತ ಬರಲಿದೆ. ಸಿಡಿ ಪ್ರಕರಣತನಿಖೆಯ ಹಂತದಲ್ಲಿ ಇರುವುದರಿಂದ ನಾವು ಚುನಾವಣಾ ವಿಷಯವಾಗಿ ಬಳಸಿಕೊಳ್ಳುವುದಿಲ್ಲ ಎಂದ ಅವರು, ಎಸ್ಐಟಿಕೆ ಮೇಲೆ ನನಗೆ ನಂಬಿಕೆ ಇಲ್ಲ. ಹೀಗಾಗಿ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ಗೆ ಮೊದಲೇ ನಿಲ್ದಾನವಿಲ್ಲ. ಅದು ಬಸ್ ನಿಲ್ದಾಣವಾಗಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ಸೈಡ್‌ ಆಕ್ಟರ್‌ ಅಷ್ಟೇ. ಬೆಲೆ ಏರಿಕೆ ಮಾಡಿದವರು ಅವರು. ಆರ್‌ಎಸ್‌ಎಸ್‌ ನಿರ್ದೇಶಕರಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ಮೋದಿ ಸರ್ಕಾರದಿಂದ ಜನರಿಗೆ ಒಳ್ಳೆಯ ದಿನಗಳು ಬಂದಿಲ್ಲ ಎಂದು ಕುಟುಕಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...