NEWSನಮ್ಮರಾಜ್ಯರಾಜಕೀಯ

ಸಾಲಶೂರಬುರುಡೆರಾಮಯ್ಯ ಸಿಎಂ ಆಗಿದ್ದಾಗ ಮಾಡಿದ ಸಾಲ ಎಷ್ಟು ಗೊತ್ತ : ನಾವು ಬಿಚ್ಚಿಟ್ಟಿದ್ದೀವಿ ನೋಡಿ ಎಂದ ರಾಜ್ಯ ಬಿಜೆಪಿ

ಬಾಯಿ ಬಿಟ್ಟರೆ ಪ್ರಖಂಡ ಪಂಡಿತರಂತೆ ಬೊಗಳೆ ಬಿಡುವ ಸಿದ್ದರಾಮಯ್ಯಗೆ ಸತ್ಯ ಹೇಳಲು ಅಂಜಿಕೆಯೇಕೆ: ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿದ್ದರಾಮಯ್ಯ ಅವರೇ, ವಾಸ್ತವಾಂಶಗಳನ್ನು ತೆರೆದಿಟ್ಟರೆ ಅದನ್ನೇ ಸುಳ್ಳು‌ ಮಾಹಿತಿ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದೀರಿ. ನಿಮ್ಮ ಸಾಲ ಸಾಧನೆಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇವೆ. ಜಾರಿಕೊಳ್ಳುವ ಪ್ರಯತ್ನ ಮಾಡದೆ, ವಾಸ್ತವವನ್ನು ಒಪ್ಪಿಕೊಳ್ಳಿ ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಸಾಲದ ಮೊತ್ತವನ್ನು ಟ್ವೀಟ್‌ ಮೂಲಕ ಬಹಿರಂಗಪಡಿಸಿದೆ.

2012-13 ರ ಕೊನೆಯಲ್ಲಿ ರಾಜ್ಯದ ಒಟ್ಟಾರೆ ಸಾಲ ಎತ್ತುವಳಿ 1 ಲಕ್ಷ ಕೋಟಿ ರೂ. ರಾಜ್ಯದ ಒಟ್ಟಾರೆ ಸಾಲದ ಮೊತ್ತ ಈ ಪ್ರಮಾಣ ತಲುಪುವುದಕ್ಕೆ ಬೇಕಾದ ಸಮಯ 62 ವರ್ಷ. ಸಿದ್ದರಾಮಯ್ಯ ಸರ್ಕಾರದ ಮೊದಲ 4 ವರ್ಷದ ಸಾಲ ಎತ್ತುವಳಿ 2 ಲಕ್ಷ ಕೋಟಿ ರೂ.. ಕೊನೆಯ ವರ್ಷ ಹಾಗೂ ಮೈತ್ರಿ ಸರ್ಕಾರದ ಅವಧಿಯ ಸಾಲ ಪ್ರಮಾಣ 3 ಲಕ್ಷ ಕೋಟಿ ರೂ. ಈ ಮಾಹಿತಿ ನೋಡಿಯಾದರೂ ರಾಜ್ಯಕ್ಕೆ ಸಾಲದ ಹೊರೆ ಹೊರಿಸಿದವರು ಯಾರೆಂಬುದನ್ನು ಈಗಲಾದರೂ ಒಪ್ಪಿಕೊಳ್ಳುವಿರಾ ಸಿದ್ದರಾಮಯ್ಯನವರೆ ಎಂದು ಬಿಜೆಪಿ ಪ್ರಶ್ನಿಸಿದೆ.

ಅನೇಕ‌ ದಶಕಗಳಿಂದ ರಾಜ್ಯ ಕಾಯ್ದುಕೊಂಡು ಬಂದ ವಿತ್ತೀಯ ಶಿಸ್ತನ್ನು ನಾಲ್ಕೇ ವರ್ಷದಲ್ಲಿ ಅಸ್ತವ್ಯಸ್ತಗೊಳಿಸಿದ ಕೀರ್ತಿ‌ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ನಮ್ಮ ಮಕ್ಕಳ ಮೇಲೆ ಸಾಲದ ಹೊರೆ ಹೊರಿಸಿದ್ದೇಕೆ? ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಮೈತ್ರಿ ಸರ್ಕಾರದ ಅವಧಿಯ ಒಟ್ಟು 7 ವರ್ಷದಲ್ಲಿ ರಾಜ್ಯದ ಒಟ್ಟಾರೆ ಸಾಲ ಪ್ರಮಾಣ 3 ಪಟ್ಟು ಹೆಚ್ಚಳವಾಗಿದೆ.

ಟ್ವಿಟ್ಟರ್ ಪ್ರವಚನಕಾರ ಸಿದ್ದರಾಮಯ್ಯ
ರಾಜ್ಯದ ಮೇಲೆ‌ ಸಾಲದ ಹೊರೆ ಹೊರಿಸಿ ನನ್ನ ಮಕ್ಕಳ ಲಸಿಕೆ ಎಲ್ಲಿದೆ ಎಂದು ಬೂಟಾಟಿಕೆ ಮಾಡುತ್ತಿದ್ದಾರೆ. ನನ್ನ ಅವಧಿಯಲ್ಲಿ ‘ಒಂದು ಬಾರಿಯೂ ವಿತ್ತೀಯ ಕೊರತೆ ಆಗಿಲ್ಲ’ ಎನ್ನುವ ಸಿದ್ದರಾಮಯ್ಯ ಅವರೇ, ನಿಮ್ಮ ಆಡಳಿತದ 5 ವರ್ಷಗಳಲ್ಲಿ ಸಾಲದ ಪ್ರಮಾಣ ದುಪ್ಪಟ್ಟಾಗಿತ್ತು. ಅಕ್ಕಿ ಕೊಟ್ಟೆ, ಮೊಟ್ಟೆ ಕೊಟ್ಟೆ ಎಂದು ಬಡಾಯಿ ಕೊಚ್ಚಿಕೊಳ್ಳುವ ನೀವು ರಾಜ್ಯದ ಜನತೆಯ ತಲೆಯ ಮೇಲೆ ಸಾಲವನ್ನು ಹೊರಿಸಿದರ ಬಗ್ಗೆ ಹೇಳಿಕೊಳ್ಳುವಿರಾ ಎಂದು ಪ್ರಶ್ನಿಸುವ ಮೂಲಕ ಸವಾಲು ಹಾಕಿದೆ.

ರಾಜ್ಯಕ್ಕೆ ತೆರಿಗೆ ಪಾಲು ಹಾಗೂ ಅನುದಾನ‌ ಹಂಚಿಕೆಯಲ್ಲಿ ಮೋದಿ ಅನ್ಯಾಯ ಮಾಡುತ್ತಿದ್ದಾರೆ ಎನ್ನುವುದು ನಿಮ್ಮ ಆರೋಪ. ಇದನ್ನು ನೋಡಿದರೆ ನೀವು ಮತ್ತೊಮ್ಮೆ ಹೊಸದಾಗಿ ಸಂಕಲನ‌, ವ್ಯವಕಲನದ ಪಾಠ ಕಲಿಯುವ ಅಗತ್ಯವಿದೆ ಎಂದು ಸಿದ್ದರಾಮಯ್ಯ ಅವರ ಕಾಲನ್ನು ಎಳೆದಿದೆ.

ಬಾಯಿ ಬಿಟ್ಟರೆ ಪ್ರಖಂಡ ಪಂಡಿತರಂತೆ ಬೊಗಳೆ ಬಿಡುವ ಸಿದ್ದರಾಮಯ್ಯಗೆ ಸತ್ಯ ಹೇಳಲು ಅಂಜಿಕೆಯೇಕೆ? ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ 10 ವರ್ಷದ ಅವಧಿಯಲ್ಲಿ ದೊರೆತ ತೆರಿಗೆ ಪಾಲು ಹಾಗೂ ಅನುದಾನದ ಒಟ್ಟು ಮೊತ್ತ 1,06,698 ಕೋಟಿ ರೂ.

√ ತೆರಿಗೆ ಪಾಲು – 53,860 ಕೋಟಿ
√ ಅನುದಾನ – 52838 ಕೋಟಿ

ಮೋದಿ ಸರ್ಕಾರ ತನ್ನ ಮೊದಲ 5 ವರ್ಷದ ಅವಧಿಯಲ್ಲಿ ನೀಡಿದ ಅನುದಾನ ಹಾಗೂ ತೆರಿಗೆ ಪಾಲು 2,34,204 ಕೋಟಿ ರೂ.

ಮೋದಿ ಸರ್ಕಾರ ನೀಡಿದ ತೆರಿಗೆ & ಅನುದಾನ

√ ತೆರಿಗೆ ಪಾಲು – 1,60,516 ಕೋಟಿ
√ ಅನುದಾನ – 73688 ಕೋಟಿ

ಯುಪಿಎ ಸರ್ಕಾರ 10 ವರ್ಷದಲ್ಲಿ ರಾಜ್ಯಕ್ಕೆ ನೀಡಿದ ಹಣಕಾಸಿನ ನೆರವಿನ ಶೇ. 119 ಪಟ್ಟು ಹೆಚ್ಚಿನ ಅನುದಾನ ಮೋದಿ ಸರ್ಕಾರ ನೀಡಿದೆ. ಹಾಗಾದರೆ ರಾಜ್ಯಕ್ಕೆ ಅನ್ಯಾಯವಾಗಿದ್ದು ಯಾರಿಂದ ಸಿದ್ದರಾಮಯ್ಯನವರೇ ಎಂದು ಕೇಳಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ