NEWSನಮ್ಮರಾಜ್ಯರಾಜಕೀಯ

ತೀವ್ರ ಸ್ವರೂಪ ಪಡೆಯುತ್ತಿದೆ ಮುಷ್ಕರ: ಏ.19ರ ನಂತರ ಸಾರಿಗೆ ನೌಕರರಿಂದ ಜೈಲ್‌ಭರೋ ಚಳವಳಿ

ಆತ್ಮಹತ್ಯೆ ಮಾಡಿಕೊಂಡ ನೌಕರರ ಕುಟುಂಬಕ್ಕೆ ತಲಾ 10 ಸಾವಿರ ರೂ. ನೀಡಿದ ಸುಪ್ರೀಂ ಕೋರ್ಟ್‌ ವಕೀಲ ಶಿವರಾಜ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಿರಂತರವಾಗಿ 11ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರುವ ರಾಜ್ಯ ರಸ್ತೆ ಸಾರಿಗೆ ನೌಕರರು ಸರಕಾರಕ್ಕೆ ಸೋಮವಾರದ ಡೆಡ್‌ಲೈನ್‌ ನೀಡಿದ್ದಾರೆ.

ಇಂದು ಕೂಟದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಜೈಲ್‌ಭರೋ ಚಳವಳಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು ಎಲ್ಲರೂ ಜೈಲಿಗೆ ಹೋಗಲು ಸಿದ್ಧರಿದ್ದಾರೆ ಎಂದು ಸರ್ಕಾರಕ್ಕೆ ಗಡುವಿನ ಜತೆಗೆ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರನಿರತ ಸಾರಿಗೆ ಸಿಬ್ಬಂದಿಯಿಂದ ಸೋಮವಾರದ ನಂತರ ಜೈಲ್‌ ಭರೋ ಚಳವಳಿ ಆರಂಭವಾಗಲಿದೆ. ಹೀಗಾಗಿ ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳುತ್ತದೆ ಎಂದರು.

ಇನ್ನು ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿರುವ ಕಾರಣ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ರಾಜ್ಯಪಾಲರಿಗೆ ಮನವಿ ಪತ್ರ ಕೊಡುತ್ತೇವೆ. ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕು ಎಂದು ಅವರು ಆಶಿಸಿದ್ದಾರೆ.

ರಾಜ್ಯ ಸರಕಾರವು ಸಾರಿಗೆ ನೌಕರರ ಬಗ್ಗೆ ತಿರಸ್ಕಾರ ಭಾವನೆ ತೋರುತ್ತಿದೆ. ನೌಕರರ ಮನೆ ಮುಂದೆ ಹೋಗಿ ಅವರನ್ನು ಮಾನಸಿಕವಾಗಿ ಘಾಸಿಗೊಳಿಸುವ ಕೆಲಸ ಮಾಡುತ್ತಿದೆ. ಇದರಿಂದ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗುತ್ತಿದೆ ಎಂದು ಹೇಳಿದರು.

ಸರ್ಕಾರ ಸಮಸ್ಯೆ ಬಗ್ಗೆ ಮಾತುಕತೆ ಮಾಡಿ ಬಗೆಹರಿಸಬೇಕು. ಆದರೆ ಸರಕಾರ ಅನ್ಯಮಾರ್ಗ ಅನುಸರಿಸುತ್ತಿದೆ. ನೌಕರರನ್ನು ಅರೆಸ್ಟ್ ಮಾಡಿ ಭಯೋತ್ಪಾದಕರಂತೆ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ಕಿರುಕುಳ ಮತ್ತು ವೇತನ ತಾರತಮ್ಯತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ನೌಕರರ ಕುಟುಂಬಕ್ಕೆ ಸಾಂತ್ವನ ಹೇಳಿದ ಸುಪ್ರೀಂ ಕೋರ್ಟ್‌ ವಕೀಲರಾದ ಶಿವರಾಜ್‌ ಅವರು ತಲಾ 10 ಸಾವಿರ ರೂ.ಗಳನ್ನು ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ನೀಡಿ, ನೊಂದ ಕುಟುಂಬದವರಿಗೆ ತಲುಪಿಸುವಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ವಕೀಲ ಶಿವರಾಜ್‌, ನನಗೂ ಸಾರಿಗೆ ನೌಕರರ ಕಷ್ಟ ಗೊತ್ತಿದೆ. ಅವರು ನ್ಯಾಯಯುತ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಹಾಗಾಗಿ ಅವರ ಬೇಡಿಕೆಯನ್ನು ಸಂಬಂಧಪಟ್ಟವರು ಕೂಡಲೇ ಈಡೇಸಬೇಕು ಎಂದು ತಾಕೀತು ಮಾಡಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...