NEWSನಮ್ಮರಾಜ್ಯರಾಜಕೀಯ

ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ: ಸಚಿವ ಆರ್‌.ಅಶೋಕ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಇಲ್ಲಿ ಶಿವಸೇನಾ ಕಾರ್ಯಕರ್ತರ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ತಿಳಿಸಿದ್ದಾರೆ.

ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಪ್ರಯುಕ್ತ ನಮ್ಮ ಗ್ರಾಮ ವಾಸ್ತವ್ಯಕ್ಕಾಗಿ ಶನಿವಾರ ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ  ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಸೇನಾ ಕಾರ್ಯಕರ್ತರು ನಿರಂತರವಾಗಿ ಪುಂಡಾಟಿಕೆ ನಡೆಸುತ್ತಿರುವುದನ್ನು ಗಮನಿಸಿದ್ದೇವೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದರು.

ಬೆಳಗಾವಿಯಲ್ಲಿ ಬಹಳ ಜನ ಮರಾಠಿ ಭಾಷಿಕರಿದ್ದಾರೆ. ಅವರು ಶಾಂತಿ ಬಯಸುತ್ತಾರೆ. ಇನ್ನು ಕೆಲವರು ಪುಂಡಾಟ ಮಾಡುತ್ತಿದ್ದಾರೆ ಅಂತವರನ್ನು ಮಟ್ಟಹಾಕಬೇಕು ಆಗ ಮಾತ್ರ ಶಾಂತಿ ಸಾಧ್ಯವಾಗುತ್ತದೆ ಎಂದರು.

ಪುಂಡರಿಗೆ ಸರಿಯಾದ ಪಾಠ ಕಲಿಸಲಾಗುವುದು, ಎಬಿಸಿಡಿ ಇಂದ ಹಿಡಿದು ಕನ್ನಡ ಅಕ್ಷರ ಮಾಲೆಯನ್ನು ಅವರಿಗೆ ಕಲಿಸಿಕೊಡುತ್ತೇವೆ ಎಂದು ಹೇಳಿದರು.

ಶಿವಸೇನಾ ಒಂದು ರಾಜಕೀಯ ಪಕ್ಷ ಅದನ್ನು ನಿಷೇಧಿಸಲು ಕಾನೂನಿನಲ್ಲಿ ಅವಕಾಶ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು ಎಂದು ಪತ್ರಕರ್ತದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇನ್ನು ಬೆಳಗಾವಿ ಸೇರಿದಂತೆ ರಕ್ಷಣೆ ವಿಷಯದಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ರಾಜಿ ಮಾಡುವ ಪ್ರಶ್ನೆಯೇ ಇಲ್ಲ. ನೆಲ-ಜಲ ಸಂರಕ್ಷಣೆಗೆ ಸರ್ಕಾರ ಸದಾ ಸಿದ್ಧವಿದೆ ಎಂದು ತಿಳಿಸಿದರು.

ಉಪಚುನಾವಣೆ ಮೂವರ ಹೆಸರು ಸಿಫಾರಸು
ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚೆಯಾಗಿದೆ. ನಾನು ಆ ಸಮಿತಿಯಲ್ಲಿದ್ದು ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದೇನೆ. ಈ ವೇಳೆ ಮೂವರ ಹೆಸರು ಶಿಫಾರಸು ಮಾಡಲಾಗಿದ್ದು, ಯಾರಿಗೆ ಕೊಟ್ಟರೆ ಒಳ್ಳೆಯದು ಎಂದು ತಿಳಿಸಿದ್ದೇನೆ.

ಟಿಕೆಟ್ ಗಾಗಿ ಅಲ್ಲಿ ದಿವಂಗತ ಸುರೇಶ್ ಅಂಗಡಿ ಕುಟುಂಬದವರು ಸೇರಿ ಬಹಳ ಜನ ಇದ್ದಾರೆ. ಇದು ನಮ್ಮದೇ ಕ್ಷೇತ್ರವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...