ವಿಜಯಪಥ ಸಮಗ್ರ ಸುದ್ದಿ
ತುಮಕೂರು: ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಕೋವಿಡ್ 19 ರ ಎರಡನೇ ಅಲೆ ಪರಿಣಾಮ ನೋಡಿಕೊಂಡು ನಿರ್ಧರಿಸಲಾಗುವುದು ಎಂದು ಬುಧವಾರ ನಡೆದ ಸುದ್ದಿಗೋಷ್ಠಿಗೆ ಮಾತನಾಡುವ ವೇಳೆ ತಿಳಿಸಿದವರು.
ಶಾಲೆಗಳು ಆರಂಭವಾಗದೆ ಮಕ್ಕಳು ಗಣಿತ ಮರೆತಿದ್ದಾರೆ ಎಂದು ಪ್ರೇಮ್‌ಜಿ ವಿಶ್ವವಿದ್ಯಾಲಯ ವರದಿ ನೀಡಿದೆ. ಆದರೆ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣ ಎರಡನ್ನು ಸರ್ಕಾರ ಗಮನಿಸಬೇಕಾಗುತ್ತದೆ ಎಂದು ಹೇಳಿದರು.
ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ಒತ್ತಡದ ಬಂದಿದೆ. ಈ ಬಗ್ಗೆ ತಜ್ಞರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಒಂದರಿಂದ ಐದನೇ ತರಗತಿ ಆರಂಭಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ನಿಯಮ ಉಲ್ಲಂಘಿಸುವುದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.