Vijayapatha – ವಿಜಯಪಥ
Saturday, November 2, 2024
CrimeNEWSನಮ್ಮರಾಜ್ಯ

ಕೋವಿಡ್ ನೆಗೆಟಿವ್ ರಿಪೋರ್ಟ್ ತಯಾರಿಸಿ ಕೊಡುತ್ತಿದ್ದ ಪತ್ರಕರ್ತನ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೊಡ ಗು:ಜಿಲ್ಲೆಯಲ್ಲಿ ನಕಲಿ ಕೋವಿಡ್-19 ನೆಗೆಟಿವ್ ರಿಪೋರ್ಟ್ ತಯಾರಿಸಿ ಕೊಡುತ್ತಿದ್ದ ಪತ್ರಕರ್ತನನ್ನು ಮಡಿಕೇರಿ ನಗರ ಹಾಗೂ ಕುಟ್ಟ ಪೊಲೀಸರು ಬಂಧಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯದ ನಂ.1 ಪತ್ರಿಕೆಯ ವರದಿಗಾರ ಅಬ್ದುಲ್‌ ಅಜೀಜ್‌ ಬಂದಿತ ಆರೋಪಿ. ಈತ ಕೇರಳಕ್ಕೆ ತೆರಳುವವರಿಗೆ ತನ್ನ ಸ್ಟುಡಿಯೋದಲ್ಲಿಯೇ ಕೊರೊನಾ ನೆಗೆಟಿವ್‌ ವರದಿ ತಯಾರಿಸಿ ನೀಡುತ್ತಿದ್ದ ಎಂದು ಲಾರಿ ಚಾಲಕನೊಬ್ಬ ತಿಳಿಸಿದ್ದಾನೆ. ಅದರಂತೆ ಕೂಡಲೇ ಕಾರ್ಯಪ್ರವೃತ್ತರಾದ ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ಅನೂಪ ಮಾದಪ್ಪ ಹಾಗೂ ಸಿಬ್ಬಂದಿ ಪತ್ರಕರ್ತನನ್ನು ಬಂಧಿಸಿದ್ದಾರೆ.

ದೇಶದ್ಯಾಂತ ಕೋವಿಡ್-19 ಪ್ರಕರಣಗಳು ಹರಡುತ್ತಿರುವ ಕಾರಣ, ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್‌ಗಳಲ್ಲಿ ಕರ್ನಾಟಕ-ಕೇರಳ ರಾಜ್ಯಗಳ ನಡುವೆ ಸಂಚರಿಸುವ ವಾಹನ ಮತ್ತು ಅದರಲ್ಲಿ ಬರುವ ಪ್ರಯಾಣಿಕರು ಹಾಗೂ ಕಾಲು ನಡಿಗೆಯಲ್ಲಿ ಸಂಚರಿಸುವವರಿಗೆ 72 ಗಂಟೆಗಳ ಒಳಗೆ ಪಡೆದಿರುವ ಕೊರೊನಾ RTPCR ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಇದನ್ನೇ ದುರುಪಯೋಗ ಪಡಿಸಿಕೊಂಡ ಪತ್ರಕರ್ತ ಈ ಕೃತ್ಯದಲ್ಲಿ ತೊಗಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಸೋಮವಾರ ಕುಟ್ಟ ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ಕುಟ್ಟ ಪೊಲೀಸ್ ಠಾಣಾ ಸಿಬ್ಬಂದಿ ಬಿ.ವಿ.ಹರೀಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆಯ ನಾಗೇಂದ್ರ ಚೆಕ್ ಪೋಸ್ಟ್‌ಗಳಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಕೇರಳ ರಾಜ್ಯ ಕಡೆಯಿಂದ ಬಂದ ವಾಹನವೊಂದರ ಚಾಲಕ ತೋರಿಸಿದ ವರದಿಯ ಸಂಖ್ಯೆಯನ್ನು ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಪರಿಶೀಲಿಸಿದಾಗ ಆ ವರದಿ ನಕಲಿ ಎಂದು ತಿಳಿದೆ. ಕೂಡಲೆ ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ