Breaking NewsNEWSನಮ್ಮರಾಜ್ಯ

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಕೊರೊನಾಗೆ ಬಲಿ, ಮಗನ ಸ್ಥಿತಿ ಚಿಂತಾಜನಕ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಅವರ ಪುತ್ರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮಾಧವಿ ಜೋಶಿ (55) ಕೊರೊನಾದಿಂದ ಪುಣೆಯಲ್ಲಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಕಳೆದ ವಾರ ಮಾಧವಿ ಜೋಶಿ ಅವರಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಸೋಮವಾರ ಅವರಲ್ಲಿ ಅತೀವ್ರ ಉಸಿರಾಟ ಸಮಸ್ಯೆ ಉಂಟಾಗಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಇನ್ನು ಗಂಗೂಬಾಯಿ ಹಾನಗಲ್ ಅವರ ಪುತ್ರ ಬಾಬುರಾವ್ (90) ಅವರ ಸ್ಥಿತಿ ಕೂಡ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಆಕ್ಸಿಜನ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಹಾನಗಲ್ ಅವರ ಕುಟುಂಬದ ಇಬ್ಬರು ಸದಸ್ಯರು ಈ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಗುಂಗೂಬಾಯಿ ಅವರ ಪುತ್ರ ಬಾಬೂರಾವ್ ಹಾನಗಲ್ ಹಾಗೂ ಅವರ ಮೊಮ್ಮಗ ಅರುಣ್ ಹಾನಗಲ್ ಈ ಸೋಂಕಿಗೊಳಗಾಗಿದ್ದರು.

ಇನ್ನು ಸೋಂಕಿಗೊಳಗಾಗಿರುವ ಅರುಣ್ ಹಾನಗಲ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ