NEWSನಮ್ಮರಾಜ್ಯರಾಜಕೀಯ

ಐದನೇ ದಿನವು ಮುಂದುರಿಯುತ್ತಿದೆ ಸಾರಿಗೆ ನೌಕರರ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನವೂ ಮುಂದುವರಿದಿದ್ದು, ನಾಲ್ಕನೇ ದಿನವಾದ ನಿನ್ನೆ ಹಲವು ಚಾಲಕರು ಮತ್ತು ನಿರ್ವಾಹಕರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಊಹಾಪೋಹಾಗಳು ಎಲ್ಲೆಡೆ ಹರಿದಾಡಿದವು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೆಲವು ನೌಕರರು ತಮ್ಮನ್ನು ಒತ್ತಾಯಪೂರ್ವಕವಾಗಿ ಕೆಲಸಕ್ಕೆ ಕರೆಸಿಕೊಂಡಿದ್ದಾರೆ ಎಂದು ಹೇಳಿದರೆ, ಇನ್ನು ಕೆಲವರು ಪ್ರಯಾಣಿಕರು ಸಾಮಾನ್ಯ ಜನತೆ ಕಷ್ಟಪಡುವುದು ನೋಡಲಾರದೆ ಕೆಲಸಕ್ಕೆ ಮರಳಿರುವುದಾಗಿ ಹೇಳಿದ್ದಾರೆ ಎಂದು ಸುದ್ದಿಯಾಗುತ್ತಿಗುತ್ತಿದೆ. ಇದು ಸುಳ್ಳು ಇದರ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬೇಡಿ ಎಂದು ಕರ್ನಾಟಕ ರಸ್ತೆಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಕೆಲವು ಕಡೆಗಳಲ್ಲಿ ಬೆರಳೆಣಿಕೆಯ ಸಾರಿಗೆ ನಿಗಮದ ಬಸ್ ಸಂಚಾರ ಬಿಟ್ಟರೆ ಮತ್ತೆಲ್ಲೂ ಇಂದು ಸರ್ಕಾರಿ ಬಸ್‌ಗಳು ಓಡಾಡುತ್ತಿಲ್ಲ. ಖಾಸಗಿ ಬಸ್‌ಗಳನ್ನೇ ಪ್ರಯಾಣಿಕರು ನೆಚ್ಚಿಕೊಳ್ಳಬೇಕಾಗಿ ಬಂದಿದೆ. ಯಾವಾಗಲೂ ಜನರಿಂದ ವ್ಯಾಪಾರ, ವಹಿವಾಟುಗಳಿಂದ ಗಿಜುಗುಡುವ ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್ ಸುತ್ತಮುತ್ತ ಪ್ರದೇಶಗಳು ಜನರಿಲ್ಲದೆ, ಬಸ್‌ಗಳಿಲ್ಲದೆ ಖಾಲಿ ಖಾಲಿಯಾಗಿ ಕಂಡುಬರುತ್ತಿದೆ.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕೆಲವು ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಇನ್ನು ಕರ್ತವ್ಯಕ್ಕೆ ಹಾಜರಾಗದ ಮತ್ತಷ್ಟು ನೌಕರರನ್ನು ರಾಜ್ಯ ರಸ್ತೆ ಸಾರಿಗೆ ಇಲಾಖೆ ವಜಾ ಮಾಡಿದೆ. ಸಾರಿಗೆ ನೌಕರರು ಮುಷ್ಕರ ನಿಲ್ಲಿಸಲು ಹಲವಾರು ಬಾರಿ ಮನವಿ ಮಾಡಲಾಗಿದ್ದು ಇದು ಅಂತಿಮ ಕರೆ, ಮುಷ್ಕರ ಕೈಬಿಡಿ, ಕರ್ತವ್ಯಕ್ಕೆ ಹಾಜರಾಗಿ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ನೌಕರರಿಗೆ ಮನವಿ ಮಾಡಿದ್ದಾರೆ.

ಈ ನಡುವೆ ನಿನ್ನೆ ಕರ್ನಾಟಕ ರಸ್ತೆಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಬೆಳಗಾವಿಯಲ್ಲಿ ಬಂಧಿಸಿದ್ದ ಪೊಲೀಸರ ನಡೆ ವಿರುದ್ಧ ನೌಕರರ ಮತ್ತು ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಕ್ರೋಶ್‌ ವ್ಯಕ್ತಪಡಿಸಿದ್ದಾರೆ. ರೈತರ ಸಂಘದ ಮುಖಂಡರು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ.

ಹಲವೆಡೆ ಸಾರಿಗೆ ನೌಕರರನ್ನು ಬೆಂಬಲಿಸಿ ಹೂವು, ಹಣ್ಣು ತರಕಾರಿ ವ್ಯಾಪಾರಿಗಳು ನಮ್ಮ ಬೆಂಬಲ ಸಾರಿಗೆ ನೌಕರರ ಹೋರಾಟಕ್ಕೆ ಎಂಬ ಬ್ಯಾನರ್‌ಗಳನ್ನು ಹಾಕಿದ್ದಾರೆ.

ಇನ್ನು ನೌಕರರ ಬೇಡಿಕೆ ಈಡೇರಿಕೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ನಾಳೆ ತೀವ್ರ ಸ್ವರೂಪ್‌ ಪ್ರತಿಭಟನೆ ಮಾಡಲು ಕೂಡ ಸಜ್ಜಾಗುತ್ತಿದೆ. ಈ ನಡುವೆ ಸಂದಾನಕ್ಕೆ ಕರೆದು ಬೇಡಿಕೆ ಈಡೇರಿಸಿದರೆ ನಮ್ಮ ಹೋರಾಟ ಹಿಂಪಡೆಯುತ್ತೇವೆ ಎಂದು ಕೂಡದ ಅಧ್ಯಕ್ಷರು ತಿಳಿಸಿದ್ದಾರೆ.

ಸರ್ಕಾರ ಕೆಲವರ ಮಾತು ಕೇಳಿ ಹಾದಿ ತಪ್ಪುತ್ತಿದೆ. ಕೆಲವರು ಹಾದಿ ತಪ್ಪಿಸಿ ತಮ್ಮ ಖಜಾನೆಯನ್ನು ಭರ್ತಿ ಮಾಡಿಕೊಳ್ಳುವ ಸಂಚು ರೂಪಿಸಿದ್ದು, ಇದರಿಂದ ಕಾರ್ಮಿಕರಿಗೆ ಅನ್ಯಾಯವಾಗಲಿದೆ. ಇದನ್ನು ಮನಗಂಡು ಸರ್ಕಾರ ಹಾದಿ ತಪ್ಪಿಸುವ ರೀತಿ ಸರ್ಕಾರದ ಕಿವಿ ಹಿಂಡುತ್ತಿರುವವರಿಂದ ಹೊರ ಬರಬೇಕು ಎಂದು ನೌಕರರು ಮನವಿ ಮಾಡಿದ್ದಾರೆ. ಜತೆಗೆ ನಮ್ಮ ಬೇಡಿಕೆ ನ್ಯಾಯಯುತವಾಗಿದ್ದು ಈಡೇರಿಸಲೇ ಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ