NEWSನಮ್ಮರಾಜ್ಯರಾಜಕೀಯ

ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸಿದೆ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೀದರ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ತವ್ಯಕ್ಕೆ ಹಾಜರಾಗಲು ಹೆಚ್ಚಿನ ಸಂಖ್ಯೆಯ ನೌಕರರು ಮುಂದೆ ಬರುತ್ತಿದ್ದು, ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗುರುವಾರ ಬೆಳಗ್ಗೆ ಹೆಚ್ಚಿನ ನೌಕರರು ಕೆಲಸಕ್ಕೆ ಮರಳಿದ್ದಾರೆ. ಇಂದು ಬೆಳಗ್ಗೆಯಿಂದ 2,500 ಬಸ್ ಗಳು ಸಂಚರಿಸುತ್ತಿವೆ. ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆಯಿದೆ ಎಂದರು.

ಮುಷ್ಕರದ ವೇಳೆ ಕಲ್ಲು ತೂರಾಟ ಮತ್ತು ಇತರ ಘಟನೆಗಳಿಂದಾಗಿ 59ಕ್ಕೂ ಹೆಚ್ಚು ಬಸ್ ಗಳು ಹಾನಿಗೀಡಾಗಿವೆ. ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಕಾನೂನಿನಂತೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸವದಿ ಎಚ್ಚರಿಸಿದ್ದಾರೆ.

ಕೆಲಸಕ್ಕೆ ಮರಳುವಂತೆ ನೌಕರರಿಗೆ ಸರ್ಕಾರ ಮತ್ತೊಮ್ಮೆ ಮನವಿ ಮಾಡುತ್ತಿದೆ. ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರ ಕಠಿಣ ಆರ್ಥಿಕ ಸ್ಥಿತಿಯನ್ನು ಎದುರಿಸುತ್ತಿದೆ. ಈ ನಡುವೆ ಸರ್ಕಾರ ಒದಗಿಸಿರುವ ಸೌಲಭ್ಯದ ಹೊರತಾಗಿಯೂ ನೌಕರರು ಮುಷ್ಕರ ಮುಂದುವರಿಸಿದರೆ, ಹೆಚ್ಚಿನ ಖಾಸಗಿ ಬಸ್ ಗಳನ್ನು ಪರ್ಯಾಯವಾಗಿ ಬಳಸಿಕೊಳ್ಳಲಾಗುವುದು.

ಸಾಂಕ್ರಾಮಿಕ ಸಮಯದಲ್ಲಿ ಸಹ ಸಂಬಳ ಮತ್ತು ಇತರ ಸವಲತ್ತುಗಳನ್ನು ಸರ್ಕಾರ ಒದಗಿಸಿದೆ ಎಂಬುದನ್ನು ನೌಕರರು ಮರೆಯಬಾರದು. ಕೊರೊನಾದಿಂದಾಗಿ ಈಗಾಗಲೇ ಭಾದಿತವಾಗಿರುವ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಬೆಳವಣಿಗೆಯ ಮೇಲೆ ಇಂತಹ ಮುಷ್ಕರಗಳು ಇನ್ನಷ್ಟು ಪ್ರತಿಕೂಲ ಪರಿಣಾಮ ಬೀರುತ್ತವೆ ಎಂಬುದನ್ನು ನೌಕರರು ಅರಿತುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಇನ್ನು ಗುರುವಾರದವರೆಗೆ 24,000 ಖಾಸಗಿ ಬಸ್ ಗಳನ್ನು ಸಾರ್ವಜನಿಕ ಸೇವೆಗಳಿಗೆ ಬಳಸಿಕೊಳ್ಳಲಾಗಿದೆ. ಜತೆಗೆ ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆಯಿದೆ ಎಂದು ಎಂದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...