Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಕಷ್ಟ ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬಸವಕಲ್ಯಾಣ (ಬೀದರ್ ಜಿಲ್ಲೆ): ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕುತಂತ್ರದ ಮೂಲಕ ಹಣ ಉಪಯೋಗ ಮಾಡಿ ಸರ್ಕಾರ ರಚಿಸಿದರೂ, ಈಗ ಹಣ ಹೇಗೆ ಸಂಪಾದನೆ ಮಾಡಬೇಕು. ಕಿಸೆ ತುಂಬಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿ ಇದ್ದಾರೆ ಎಂದು ಮುಖಂಡರ ಹೆಸರು ಪ್ರಸ್ತಾಪ ಮಾಡದೆ ನಗರದಲ್ಲಿ ಸುದ್ದಿಗಾರರ ಎದುರು ಅಸಮಾಧಾನ ಹೊರಹಾಕಿದರು.

ನಾನು 14 ತಿಂಗಳು ಮೈತ್ರಿ ಸರ್ಕಾರದ ನಾಯಕತ್ವ ವಹಿಸಿದ್ದಾಗ ಯಾರು ಬೀದಿಗೆ ಇಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿಲ್ಲ. 2018 ಹಾಗೂ 2006ರಲ್ಲಿ ಇಂತಹ ಪ್ರತಿಭಟನೆಗಳು ನಡೆದಿಲ್ಲ ಅದಕ್ಕೆ ನಾನು ಅವಕಾಶವನ್ನು ಕೊಟ್ಟಿರಲಿಲ್ಲ ಎಂದು ಹೇಳಿದರು.

ಮೈತ್ರಿ ಸರ್ಕಾರದ ಅವಧಿಯಲ್ಲಿ ಸಮಸ್ಯೆ ಉದ್ಭವಿಸಿಲ್ಲ. ಬಿಜೆಪಿ ಸರ್ಕಾರದಲ್ಲಿ ಸಮಸ್ಯೆ ಉದ್ಭವವಾಗಿದೆ. ಅದನ್ನು ಅವರೇ ಬಗೆಹರಿಸಬೇಕು. ಯೋಚನೆ ಮಾಡಿ ತೀರ್ಮಾನ ಕೈಗೊಳ್ಳಬೇಕು. ಅದನ್ನು ಬಿಟ್ಟು ಇಂದಿನ ಸರ್ಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಮಾಹಿತಿ ತರಿಸಿಕೊಂಡು ಲಕ್ಷ್ಮಣ ಸವದಿ ಮಾತನಾಡುವುದು ಸೂಕ್ತ ಎಂದು ಸಲಹೆ ನೀಡಿದರು.

ಬಿಜೆಪಿಯವರು ಅಭಿವೃದ್ಧಿಯಿಂದ ಜಯ ಸಾಧಿಸಿಲ್ಲ ವೈಯಕ್ತಿಕವಾಗಿ ಹಣ ಲೂಟಿ ಮಾಡಿ ಅಭಿವೃದ್ಧಿ ಕಂಡಿದ್ದಾರೆ. ಹಣ ಚೆಲ್ಲಿ ಚುನಾವಣೆಯಲ್ಲಿ ಗೆಲ್ಲಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಜನರನ್ನು ಹಣದಿಂದ ಸದಾಕಾಲ ಮರಳು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ದೇವೇಗೌಡ ಅವರು ಉತ್ತರ ಕರ್ನಾಟಕಕ್ಕೆ ಕಲ್ಪಿಸಿದ ನೀರಾವರಿ ಯೋಜನೆ ಹಾಗೂ ನಾನು ಮುಖ್ಯಮಂತ್ರಿಯಾಗಿದ್ದಾಗ ಕೊಟ್ಟಿರುವ ಯೋಜನೆಗಳನ್ನು ಜನ ಮರೆತಿಲ್ಲ. ಮುಸ್ಲಿಮರಿಗೆ ಶೇಕಡ ನಾಲ್ಕರಷ್ಟು ಮೀಸಲಾತಿ ಕೊಡಲಾಗಿತ್ತು. ಒಟ್ಟಾರೆಯಾಗಿ ಮತದಾರರು ನಮ್ಮ ಪರವಾಗಿದ್ದಾರೆ ಎಂದರು.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ