NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ತಾವು ಖರೀದಿಸಿದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ ಎಂದು ಸರಣಿ ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ಬಿಎಸ್‌ ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ‘ ಮುಂತಾದವರನ್ನುಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ. ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ ಎಂದಿದ್ದಾರೆ.

ಇನ್ನೊಂದೆಡೆ,‘ಅನ್ನ ಹಳಸಿದೆ, *** ಕಾದಿದೆ‘ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ ಎಂದು ಕಾಂಗ್ರೆಸ್‌ ಮುಖಂಡರಿಗೆ ಪರೋಕ್ಷವಾಗಿ ತಿರುಗೆಟು ನೀಡಿದ್ದಾರೆ.

ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೋವಿಡ್‌ ನಿಯಮಗಳನ್ನೆಲ್ಲ ಮೀರಿ ಬೀದಿಗೆಬಿದ್ದಿರುವ ಕಾಂಗ್ರೆಸ್‌ ಪಕ್ಷಗಳೆರಡೂ ಆತ್ಮಾವಲೋಕನೆ ಮಾಡಿಕೊಳ್ಳಬೇಕು. ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿರುವ ಈ ಪಕ್ಷಗಳ ನಡೆಯನ್ನು ಜನ ಗಮನಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ? ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಘಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ.

ಆರೋಗ್ಯ ತುರ್ತು ಪರಿಸ್ಥಿತಿಯ ನಡುವೆ ಕನ್ನಡ, ಕರ್ನಾಟಕದ ಅಸ್ಮಿತೆ ಪ್ರಶ್ನೆ ಮಾಡುವಂಥ ಘಟನೆಗಳು ಒಂದರ ಹಿಂದೊಂದರಂತೆ ನಡೆದವು. ಈ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್‌ ಏನು ಮಾಡಿದವು? ಇವರೆಲ್ಲ ರಾಜಕೀಯ ಮಾಡುತ್ತಿರುವುದು ಕರ್ನಾಟಕದಲ್ಲೇ ಅಲ್ಲವೇ? ಆದರೆ, ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಇವರೆಲ್ಲ ಅದ್ಯಾವ ಬಿಲದಲ್ಲಿ ಅಡಗಿದ್ದರು ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು