ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವರಾದ ಬಿ.ಟಿ ಲಲಿತಾ ನಾಯಕ್ ಸೇರಿದಂತೆ ನಾಲ್ಕೈದು ಗಣ್ಯರಿಗೆ ಬಂದಿರುವ ಕೊಲೆ ಬೆದರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ಆ ಬೆದರಿಕೆ ಪತ್ರ ಕಳುಹಿಸಿರುವವರ ಮಾಹಿತಿ ಕಲೆಹಾಕಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿದರು.
ಲಲಿತಾ ನಾಯಕ್ ಅವರು ಈ ಸಂಬಂಧ ಪೊಲೀಸರಿಗೆ ಸಮಗ್ರ ಮಾಹಿತಿ ನೀಡಿರುವ ಬಗ್ಗೆಯೂ ಗೊತ್ತಾಗಿದೆ ಎಂದರು.
ಕೊಲೆ ಬೆದರಿಕೆ ಪತ್ರದ ಬಗ್ಗೆ ಲಲಿತಾ ನಾಯಕ್ ಅವರು ಪೋಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೋಲೀಸರು ತನಿಖೆ ನಡೆಸಲಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿರಿಯ ಲೇಖಕಿ ಬಿ.ಟಿ.ಲಲಿತಾ ನಾಯಕ್ ಸೇರಿ ನಾಲ್ಕೈದು ಗಣ್ಯರ ಹತ್ಯೆ ಬೆದರಿಕೆ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದರು.