Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಮೆಜೆಸ್ಟಿಕ್‌-ಚನ್ನಮ್ಮಕೆರೆ ಅಚ್ಚುಕಟ್ಟು ನಡುವೆ ಬಿಎಂಟಿಸಿ ಬಸ್‌ ಓಡಿಸುತ್ತಿರುವ ಚಾಲಕ ತ್ಯಾಗರಾಜ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ನಡುವೆಯೇ ಮೆಜೆಸ್ಟಿಕ್‌ನಿಂದ ಚನ್ನಮ್ಮಕೆರೆ ಅಚ್ಚುಕಟ್ಟು ಪ್ರದೇಶವರೆಗೆ ಬಿಎಂಟಿಸಿ 13  ಕತ್ತರಿಗುಪ್ಪೆ ಘಟಕದ ಚಾಲಕ ಕಂ ನಿರ್ವಾಹಕ  ತ್ಯಾಗರಾಜ್‌  ಬಿಎಂಟಿಸಿ ಬಸ್‌ ಓಡಿಸುತ್ತಿದ್ದಾರೆ.

ಈ ನಡುವೆ  ಸುದ್ದಿಗಾರರೊಂದಿಗೆ ಮಾತನಾಡಿದ, ಬಸ್‌ಗೆ ಹಾನಿಯಾದರೆ ಕೋಡಿಹಳ್ಳಿ ಚಂದ್ರಶೇಖರ್‌ ಮತ್ತು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಅವರನ್ನೆ ಹೊಣೆ ಮಾಡಬೇಕು ಎಂದು ಪೊಲೀಸ್‌ಠಾಣೆಯಲ್ಲಿ ದೂರು ನೀಡಿ ಬಂದಿರುವುದಾಗಿ ಹೇಳಿದ್ದಾರೆ.

ಇನ್ನು ನಾನು ಸಾರ್ವಜನಿಕ ಸೇವೆ ಮಾಡಲು ಬಂದಿದ್ದೇನೆ ಮಾಡುತ್ತೇನೆ. ನಮಗೆ ಸರ್ಕಾರ ಕೊರೊನಾ ಸಂಕಷ್ಟದಲ್ಲಿ 3 ತಿಂಗಳು ವೇತನ ನೀಡಿದೆ ಹೀಗಾಗಿ ನಾನು ಇಂದು ಪೂರ್ತಿದಿನ ಸೇವೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್‌ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.

ಇನ್ನು ಮುಷ್ಕರವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ಗಳು ಮತ್ತು ಕೆಲ ಆಟೋಚಾಲಕರು ಸುಲಿಗೆಗೆ ಇಳಿಸಿದ್ದಾರೆ.

ಕೆಂಗೇರಿ ಸೇರಿ ಮೈಸೂರು ರಸ್ತೆಯಲ್ಲಿ ಯಾವುದೇ ಬಸ್‌ಗಳ ಸಂಚಾರ ಇಲ್ಲ. ಇನ್ನು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ಚಿಕ್ಕಮಗಳೂರು, ಮಂಗಳೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳ ಸಾರಿಗೆ ಡಿಪೋಗಳ ನೌಕರರು ಬೀದಿಗಿಳಿಯದಿರುವುದರಿಂದ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ.

 

 

 

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?